ತುಮಕೂರು ನರ್ಸಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಒಕ್ಕರಿಸಿದ ಕೊರೋನ.
ಇಷ್ಟು ದಿನ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಸಾಕಷ್ಟು ಇಳಿಮುಖ ಕಂಡು ಬೆರಳೆಣಿಕೆಯ ಕೋವಿಡ್ ಪಾಸಿಟಿವ್ ಕೇಸ್ ಗಳು ಕಂಡು ಬರುತ್ತಿದ್ದವು ಆದರೆ ಈಗ ಏಕಾಏಕಿ ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗುವ ಮೂಲಕ ಆತಂಕ ಸೃಷ್ಟಿಯಾಗಿದೆ.
ಇದಕ್ಕೆ ಪುಷ್ಟಿ ನೀಡುವಂತೆ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾಕಷ್ಟು ನರ್ಸಿಂಗ್ ಕಾಲೇಜುಗಳು ಈದ್ದು ಇನ್ನು ನರ್ಸಿಂಗ್ ಕಾಲೇಜಿನಲ್ಲಿ ಕೇರಳ ಮೂಲದ ಸಾಕಷ್ಟು ವಿದ್ಯಾರ್ಥಿಗಳು ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಈಗ ಕೇರಳ ಹಾಗೂ ಮಹಾರಾಷ್ಟ್ರ ಕೊರೊನಾ ಸೋಂಕು ಹೆಚ್ಚಿದೆ ಆದರೆ ಪರೀಕ್ಷೆ ಬರೆಯಲು ಕೇರಳ ಹಾಗೂ ಮಹಾರಾಷ್ಟ್ರ ದಿಂದ ತುಮಕೂರು ಜಿಲ್ಲೆಗೆ ಹಲವು ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ.
ಆದರೆ ಸರ್ಕಾರದ ಮಾರ್ಗಸೂಚಿ ಅನ್ವಯ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಬರುವ ಎಲ್ಲರಿಗೂ ಕೋವಿದ್ ಪರೀಕ್ಷೆ ಮಾಡಲಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಕೇರಳದಿಂದ ಆಗಮಿಸಿದ್ದ ತುಮಕೂರಿನ ಸಿದ್ದಗಂಗಾ ನರ್ಸಿಂಗ್ ಕಾಲೇಜಿನ 8 ವಿದ್ಯಾರ್ಥಿಗಳು ಹಾಗೂ ವರದರಾಜ ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳು ಸೇರಿದಂತೆ 15 ವಿದ್ಯಾರ್ಥಿಗಳಿಗೆ ಕರುನಾ ಸೋಂಕು ದೃಢ ಪಟ್ಟಿರುವುದಾಗಿ ತುಮಕೂರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರವರು ಮಂಗಳವಾರ ತಿಳಿಸಿದ್ದಾರೆ.
ಇನ್ನು ಕೇರಳದಿಂದ ಆಗಮಿಸಿದ್ದ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು ವಿದ್ಯಾರ್ಥಿಗಳು ಇರುವ ಪ್ರದೇಶಗಳನ್ನು ಕಂಟೋನ್ಮೆಂಟ್ ವಲಯಗಳನ್ನಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಅವರ ಸಂಪರ್ಕದಲ್ಲಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಮಾಡಲಾಗುತ್ತದೆ.
ಈ ಮೂಲಕ ಸೋಂಕು ತಡೆಗಟ್ಟಲು ಸಂಬಂಧಪಟ್ಟ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಸರ್ವೆಲೆನ್ಸ್ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಈ ಮೂಲಕ ಸೋಂಕು ವ್ಯಾಪಿಸದಂತೆ ತಡೆಗಟ್ಟಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರವರು ತಿಳಿಸಿದ್ದಾರೆ.