ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 15 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ 14 ದಿನಗಳಲ್ಲಿ ಕೊರೋನಾ ಸೋಂಕಿತ ಪ್ರಕರಣಗಳ ದರ ಹೆಚ್ಚಾಗಿದ್ದು, ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್‌ನ ಕಡ್ಡಾಯವಾಗಿ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್-19ರ ಎರಡನೇ ಅಲೆ ನಿಯಂತ್ತಿಸಲು ಎಚ್ಚೆತ್ತುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಜನತೆ ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳನ್ನು ನಡೆಸುವ ಹಾಗೂ ಭಾಗವಹಿಸುವ ಸಂದರ್ಭ ಸರ್ಕಾರ ನಿಗದಿಪಡಿಸಿರುವ ಕೋವಿಡ್-19ರ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು, ಹೆಚ್ಚು ಜನಸಂದಣಿ ಸೇರದಂತೆ ಗಮನಹರಿಸಬೇಕು. ಕ್ರೀಡಾಕೂಟಗಳಿಗೆ ಸೂಚಿಸಿರುವ ಮಾರ್ಗಸೂಚಿಯನ್ವಯ ನಿಯಮಗಳನ್ನು ಪಾಲಿಸಬೇಕು.
2021ರ ಮಾರ್ಚ್ 17ರಂದು ಬೆಳಿಗ್ಗೆ 10.00 ಗಂಟೆಯಿಂದ 11.30 ಗಂಟೆಯವರೆಗೆ ವಿಶೇಷವಾಗಿ ಜಿಲ್ಲೆಯ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಹಾಗೂ ಮಾಜಿ ಸದಸ್ಯರಿಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು/ ಸಮುದಾಯ ಆರೋಗ್ಯ ಕೇಂದ್ರಗಳು/ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆ ನೀಡಲಾಗುವುದು.
60 ವರ್ಷ ಮೇಲ್ಪಟ್ಟ ವಯೋವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟು ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವವರು ಕೋವಿಡ್-19 ಲಸಿಕೆಯನ್ನು ಪಡೆಯಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುಮೂರ್ತಿ ಬೂದಿಗೆರೆ
8861100990