ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

 

 ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 12 ದೊಡ್ಡಬಳ್ಳಾಪುರದ‌ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಕೋವಿಡ್-19 ಲಸಿಕೆ ಪಡೆದರು.

ಕೋವಿಡ್-19 ಲಸಿಕೆ ಪಡೆದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಅವರು ಲಸಿಕೆ ಸುರಕ್ಷಿತವಾಗಿದ್ದು, ಲಸಿಕೆ ಪಡೆಯುವುದರಿಂದ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ ಎಂದರಲ್ಲದೆ, ಸಾರ್ವಜನಿಕರು ಯಾವುದೇ ಊಹಾ-ಪೋಹಗಳಿಗೆ ಎಡೆಮಾಡಿಕೊಡದೇ ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಟಿ.ಶಿವರಾಜು, ತಾಲ್ಲೂಕು ವೈದ್ಯಾಧಿಕಾರಿ‌ ಡಾ.ಪರಮೇಶ್ವರ ಸೇರಿದಂತೆ ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!