ಕೋವಿಡ್-೧೯: ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಪುನರ್ವಸತಿಗೆ ಸೂಕ್ತ ಕ್ರಮ ವಹಿಸಿ; ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

ಕೋವಿಡ್-೧೯: ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಪುನರ್ವಸತಿಗೆ ಸೂಕ್ತ ಕ್ರಮ ವಹಿಸಿ; ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಇಬ್ಬರೂ ಪೋಷಕರನ್ನು ಕಳೆದುಕೊಂಡ ೫ ಮಕ್ಕಳು ಹಾಗೂ ಒಬ್ಬರು ಪೋಷಕರನ್ನು ಕಳೆದುಕೊಂಡ ೫೩೧ ಮಕ್ಕಳಿಗೆ ಪುನರ್ವಸತಿ, ಆರ್ಥಿಕ ನೆರವು ಮತ್ತು ಸುರಕ್ಷತೆಯನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು. 

 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿoದು ಕೋವಿಡ್-೧೯ ಸೋಂಕಿತ/ಬಾಧಿತ ಹಾಗೂ ಲಾಲನೆ ಮತ್ತು ರಕ್ಷಣೆಗೆ ಅಗತ್ಯವಿರುವ ಮಕ್ಕಳ ಗುರುತಿಸುವಿಕೆ, ಪುನರ್ವಸತಿ ಕಲ್ಪಿಸುವ ಸಂಬoಧ ಜರುಗಿದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

 

ಮಕ್ಕಳ ಆರೈಕೆ ಅತ್ಯಗತ್ಯ:-

ಕೋವಿಡ್‌ನಿಂದ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅವರ ಆರೈಕೆ ಅತ್ಯಗತ್ಯ. ಆದ್ದರಿಂದ ಕೋವಿಡ್ ಸಂತ್ರಸ್ತ ಮಕ್ಕಳು ಶೋಷಣೆಗೆ ಒಳಗಾಗದಂತೆ, ಕಾನೂನು ಬಾಹಿರ ದತ್ತು ಪ್ರಕ್ರಿಯೆಗೆ ಒಳಪಡದಂತೆ, ಬಾಲ ಕಾರ್ಮಿಕರಾಗದಂತೆ, ಬಾಲ್ಯವಿವಾಹ ಮತ್ತು ಕಳ್ಳಸಾಗಾಣಿಕೆಗೆ ಒಳಗಾಗದಂತೆ, ಬಿಕ್ಷಾಟನೆಗೆ ತೊಡಗದಂತೆ ಹಾಗೂ ಇನ್ನಿತರ ಸಂಕಷ್ಟಕ್ಕೆ ಈಡಾಗದಂತೆ ಮಕ್ಕಳನ್ನು ರಕ್ಷಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

 

೧೦೯೮ ಮಕ್ಕಳ ಸಹಾಯವಾಣಿ:

ತೊಂದರೆಯಲ್ಲಿರುವ ಮತ್ತು ಲಾಲನೆ/ ರಕ್ಷಣೆಗೆ ಅವಶ್ಯಕವಿರುವ ಮಕ್ಕಳ ನೆರವಿಗಾಗಿ ಸಹಾಯವಾಣಿ ೧೦೯೮ ಕಾರ್ಯ ಸಮರ್ಪಕವಾಗಿ ನಡೆಯಬೇಕು. ವಿಶೇಷವಾಗಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಮಕ್ಕಳ ಸಹಾಯವಾಣಿ ಬಗ್ಗೆ ಅರಿವು ಮೂಡಿಸಬೇಕು. ಸಾರ್ವಜನಿಕ ಜನದಟ್ಟಣೆ ಇರುವ ಸ್ಥಳಗಳಲ್ಲಿ ಸಹಾಯವಾಣಿ ಮಾಹಿತಿ ಫಲಕಗಳನ್ನು ಪ್ರದರ್ಶಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ರಚನೆಯಾಗಿರುವ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಮುಖಾಂತರ ಮಾಹಿತಿ ಪಡೆದು ಅಗತ್ಯ ಸೂಚನೆ ನೀಡಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಪೋಷಕರನ್ನು ಕಳೆದುಕೊಂಡು ಸಂಕಷ್ಟಕ್ಕೆ ಒಳಗಾದ, ಕೋವಿಡ್ ಕಾರಣದಿಂದ ಪೋಷಕರು ಆಸ್ಪತ್ರೆಗೆ ದಾಖಲಾಗಿ ತಾತ್ಕಾಲಿಕವಾಗಿ ಆಶ್ರಯದ ಅಗತ್ಯವಿರುವ, ಬಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳು ಕಂಡುಬAದಲ್ಲಿ ಕೂಡಲೇ ಸಹಾಯವಾಣಿ ೧೦೯೮ಗೆ ಮಾಹಿತಿ ನೀಡುವಂತೆ ಕ್ಷೇತ್ರಮಟ್ಟದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಅರಿವು ಮೂಡಿಸಬೇಕು. ಕೋವಿಡ್-೧೯ನಿಂದಾಗಿ ಪೋಷಕರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಮಗುವನ್ನು ಯಾರ ಸಂರಕ್ಷಣೆಗೆ ಒಳಪಡಿಸಬೇಕೆಂಬ ಮಾಹಿತಿಯ ದತ್ತಾಂಶವನ್ನು ನಿರ್ವಹಿಸಲು ಎಲ್ಲಾ ಆಸ್ಪತ್ರೆಗೆ ಸೂಚಿಸಬೇಕು. ಮಕ್ಕಳ ರಕ್ಷಣೆಗೆ ಸಂಬoಧಿಸಿದoತೆ ಆಶಾ ಕಾರ್ಯಕರ್ತೆಯರಿಗೆ ಅರಿವು ಮೂಡಿಸಬೇಕು ಎಂದು ಸಂಬoಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

 

ಕಾನೂನು ಬಾಹಿರ ದತ್ತು ತಡೆಗೆ ಕ್ರಮವಹಿಸಿ:-

ಕೋವಿಡ್-೧೯ರ ಸಾಂಕ್ರಾಮಿಕದಿoದ ಪೋಷಕರನ್ನು ಕೆಳದುಕೊಂಡಿರುವ ಮಗುವನ್ನು ದತ್ತು ನೀಡುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಸಂದೇಶ ನೀಡುವವರ ವಿರುದ್ಧ ಕ್ರಮಕೈಗೊಳ್ಳಲು ಕ್ರಮವಹಿಸಬೇಕು. ಮಕ್ಕಳನ್ನು ರಕ್ಷಿಸುವ ಕಾರ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟುವ, ಬಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಪಾರು ಮಾಡುವ ಹಾಗೂ ಮಕ್ಕಳ ಸಾಗಾಣಿಕೆ ತಡೆಗಟ್ಟುವ ಸಂದರ್ಭದಲ್ಲಿ ಮಕ್ಕಳನ್ನು ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆಗಳು ಕಂಡುಬoದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪೋಷಕರನ್ನು ಕಳೆದುಕೊಂಡಿರುವ ಮಗುವನ್ನು ದತ್ತು ನೀಡುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಸಂದೇಶ ಪ್ರಸಾರವಾಗದಂತೆ ಮೇಲ್ವಿಚಾರಣೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

 

 

 

ಮಹಿಳಾ ಮತ್ತು ಮಕ್ಕಳ ಇಲಾಖೆ ಕಲ್ಯಾಣಾಧಿಕಾರಿ ಶ್ರೀಧರ್ ಮಾತನಾಡಿ, ಕೋವಿಡ್-೧೯ ಬಾಧಿತ ಮಕ್ಕಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಲು ಟಾಸ್ಕ್ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿ ಕಾರ್ಯವು ಚಾಲ್ತಿಯಲ್ಲಿದೆ. ಸಂಕಷ್ಟದಲ್ಲಿದ್ದ ಮಕ್ಕಳ ನೆರವಿಗಾಗಿ ಈ ಸಹಾಯವಾಣಿ ನೆರವಾಗುತ್ತಿದೆ. ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡರೆ ಅಂತಹ ಮಕ್ಕಳ ರಕ್ಷೆಣೆ ಮಾಡಲು ಸಂಸ್ಥೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

 

ಜಿಲ್ಲಾ ವ್ಯಾಪ್ತಿಯಲ್ಲಿ ೩೫೯೦ ಮುಖ್ಯ, ೫೧೯ ಮಿನಿ ಸೇರಿ ೪೧೦೯ ಅಂಗನವಾಡಿ ಕೇಂದ್ರಗಳಿದ್ದು, ೭೩೭೫೫ ಗಂಡು ಹಾಗೂ ೭೧೮೯೫ ಹೆಣ್ಣು ಸೇರಿ ಒಟ್ಟು ೧೪೫೬೫೦ ಮಕ್ಕಳಿದ್ದಾರೆ. ಈ ಪೈಕಿ ಇಬ್ಬರು ಪೋಷಕರನ್ನು ಕಳೆದುಕೊಂಡ ೫ ಹಾಗೂ ಒಬ್ಬರು ಪೋಷಕರನ್ನು ಕಳೆದುಕೊಂಡ ೫೩೧ ಮಕ್ಕಳ ಸೂಕ್ತ ರಕ್ಷಣೆಗೆ ಹಾಗೂ ಪ್ರಾಯೋಜಿತ ಕಾರ್ಯಕ್ರಮದಡಿ ಆರ್ಥಿಕ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಮಾಹಿತಿ ಒದಗಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಸೇರಿದಂತೆ ಇತರರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!