ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಅಪಘಾತದಲ್ಲಿ ಸಾವು.

ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಅಪಘಾತದಲ್ಲಿ ಸಾವು.

 

ಕುಣಿಗಲ್ _ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ತನ್ನ ಸ್ನೇಹಿತರೊಂದಿಗೆ ಬೈಕ್ನಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಬೈಕ್ ಅಪಘಾತಕ್ಕೆ ಈಡಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ.

 

 

ಇಂದು ಬೆಳಗ್ಗೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿಯ ನವೀನ್ ಎಂಬಾತ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿ ತೆರಳುತ್ತಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ .

 

 

ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ.

 

 

 

ಕಳೆದ ಐದು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಸಂಬಂಧ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಬೆನ್ನಲ್ಲೇ ಹೃದಯಾಘಾತಕ್ಕೆ ಈಡಾಗಿ ಅಸುನೀಗಿದಳು ಇನ್ನು ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version