ಡಿಸೆಂಬರ್ 31ರ ಕರ್ನಾಟಕ ಬಂದ್ ವಿವಿಧ ಕನ್ನಡಪರ ಸಂಘಟನೆಗಳ ಬೆಂಬಲ ಘೋಷಣೆ.
ಇದೇ ತಿಂಗಳ 31 ರಂದು ವಿವಿಧ ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಗೊಳಿಸಿರುವುದು ಹಾಗೂ ಕನ್ನಡ ನಾಡಿನ ಪ್ರತೀಕವಾದ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಪುಂಡಾಟಿಕೆ ನಡೆಸಿದ ಹಿನ್ನೆಲೆಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ವಿವಿಧ ಪರ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಯಶಸ್ವಿ ಗೊಳಿಸಲು ತುಮಕೂರಿನಲ್ಲಿ ವಿವಿಧ ಕನ್ನಡಪರ ಸಂಘಟನೆಯ ಮುಖಂಡರು ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಪದೇ-ಪದೇ ಕನ್ನಡ ನಾಡಿನ ಮೇಲೆ ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದ್ದು ಇದರಿಂದ ಕಾನೂನು ಸುವ್ಯವಸ್ಥೆ ಹಾಗೂ ಗಡಿ ಭಾಗದ ಜನರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಹಾಗಾಗಿ ಕೂಡಲೇ ರಾಜ್ಯದಲ್ಲಿ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ಕರ್ನಾಟಕದ ವಿವಿಧ ಪರ ಸಂಘಟನೆಗಳು ಒಕ್ಕೊರಲಿನಿಂದ ಆಗ್ರಹಿಸಿದೆ.
ಇದರ ಹಿನ್ನೆಲೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ತುಮಕೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ಸೇರಿ ಒಕ್ಕೋರಲ ಅಭಿಪ್ರಾಯದಂತೆ ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕನ್ನಡ ಸೇನೆಯ ಧನಿಯಾ ಕುಮಾರ್, ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಶಂಕರ್, ದಲಿತ ಸಂಘಟನೆಯ ಮುಖಂಡ ಪಿ.ಎನ್ ರಾಮಯ್ಯ, ಕನ್ನಡ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಈ.ರಘುರಾಮ್, ಜಯ ಕರ್ನಾಟಕ ಸಂಘಟನೆಯ ತುಮಕೂರು ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಅರುಣ್ ಸೇರಿದಂತೆ ಹಲವು ಕನ್ನಡಪರ ಸಂಘಟನೆಯ ಮುಖಂಡರು ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ ಈ ಮೂಲಕ ತುಮಕೂರು ಜಿಲ್ಲೆಯ ಎಲ್ಲ ಸಾರ್ವಜನಿಕರು ವಿವಿಧ ಸಂಘಟನೆಯ ಮುಖಂಡರು ಟ್ಯಾಕ್ಸಿ ಹಾಗೂ ಆಟೋ ಚಾಲಕರು ಸೇರಿದಂತೆ ಎಲ್ಲಾ ವರ್ತಕರು ಕರ್ನಾಟಕ ಬಂದ್ ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವರದಿ ಮಾರುತಿ ಪ್ರಸಾದ ತುಮಕೂರು