ತುಮಕೂರು ರಿಂಗ್ ರಸ್ತೆಗೆ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಡಲು ಒತ್ತಾಯ.
ತುಮಕೂರು_ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್ ಡಿ ದೇವೇಗೌಡರ ಹೆಸರನ್ನ ತುಮಕೂರಿನ ರಿಂಗ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ಜೆಡಿಎಸ್ ಮುಖಂಡರು ತುಮಕೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಜೆಡಿಎಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎನ್ ಗೋವಿಂದರಾಜು ರವರ ನೇತೃತ್ವದ ನಿಯೋಗ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರನ್ನು ಭೇಟಿ ಮಾಡಿ ಇತ್ತೀಚಿಗೆ ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ನೂತನವಾಗಿ ನಿರ್ಮಿಸಿರುವ 10.5 km ಉದ್ದದ ತುಮಕೂರಿನ ರಿಂಗ್ ರಸ್ತೆಗೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡರ ಹೆಸರನ್ನ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ನ ಪ್ರಧಾನ ಕಾರ್ಯದರ್ಶಿ ಎನ್ ಗೋವಿಂದರಾಜುರವರು ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರ ಹೆಸರನ್ನ ತುಮಕೂರಿನ ರಿಂಗ್ ರಸ್ತೆಗೆ ಇಡುವ ಸಂಬಂಧ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಮಹಾಪೌರರಿಗೆ ಮನವಿ ಸಲ್ಲಿಸಲಾಗಿದೆ ಇನ್ನು ಒಂದು ವರ್ಷದ ಹಿಂದೆ ನೂತನವಾಗಿ ನಿರ್ಮಾಣ ಮಾಡಿರುವ ರಿಂಗ್ ರಸ್ತೆಗೆ ಯಾವುದೇ ಹೆಸರು ಇಟ್ಟಿರಲಿಲ್ಲ ಈಗ ನೂತನ ಹೆಸರನ್ನು ನಾಮಕರಣ ಮಾಡಲು ಪಾಲಿಕೆ ಮುಂದಾಗಿದ್ದು ದೇವೇಗೌಡರ ಹೆಸರನ್ನ ಸೂಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ನ ಪಾಲಿಕೆ ಸದಸ್ಯರಾದ ನರಸಿಂಹಮೂರ್ತಿ, ಮನು, ವಿಜಿ ಕುಮಾರ್, ಮಧು ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಹಾಜರಿದ್ದರು.
ವರದಿ_ ಮಾರುತಿ ಪ್ರಸಾದ್ ತುಮಕೂರು