ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಸಂಸದರಾದ ಸನ್ಮಾನ್ಯ ಶ್ರೀ ಶ್ರೀ ನಾರಾಯಣ ಸ್ವಾಮಿ ನವರು ನೂತನವಾಗಿ ಕರ್ನಾಟಕ ರಾಜ್ಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಅವರನ್ನು ಅಭಿನಂದಿಸಲಾಯಿತು.
ನಂತರ ಮಾತನಾಡಿದ ಮಾಜಿ ಸಂಸದರಾದ ಶ್ರೀ ನಾರಾಯಣಸ್ವಾಮಿ
ಕೇಂದ್ರದ ಬಿಜೆಪಿ ಸರಕಾರದ ಆಡಳಿತ ಲೋಪದೋಷದಿಂದ ಇಡೀ ರಾಷ್ಟ್ರ, ರಾಜ್ಯಕ್ಕೆ ಕೋವಿಡ್‌ಗೆ ಸಿಲುಕುವಂತಾಯಿತು ಎಂದು ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಆರೋಪಿಸಿದರು.
ಗ್ರಾಮ ಮಟ್ಟದಿಂದ ಈ ಮಟ್ಟಕ್ಕೆ ಬರಲು ಎಲ್ಲರ ಸಹಕಾರದಿಂದ ಮಾತ್ರ ಸಾಧ್ಯವಾಯಿತು. ಪಂಚಾಯತ್ ರಾಜ್ ಸಂಘಟನೆ ಕೇವಲ ಒಂದು ಪಂಚಾಯಿತಿಗೆ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಅನ್ವಯಿಸುವಂತಹದ್ದು, ಪಂಚಾಯತ್ ರಾಜ್‌ನಲ್ಲಿ ಏನೆಲ್ಲಾ ಕರ್ತವ್ಯಗಳು ಇವೆ. ಏನೆಲ್ಲಾ ತಿದ್ದುಪಡಿಗಳು ಸಂವಿಧಾನದಲ್ಲಿ ಆಗಿದೆ. ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳ ಪಾತ್ರವೇನು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು.
ಈಗಿನ ರಾಜಕೀಯ ವಿದ್ಯಮಾನಗಳಲ್ಲಿ ಕೇಂದ್ರದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಇದ್ದು, ಬಿಜೆಪಿ ಸರಕಾರ ಬಂದಾಗಿನಿಂದಲೂ ಅವರಲ್ಲೇ ಸೀಟುಗಳಿಗೆ ಕಿತ್ತಾಟಗಳು ಪ್ರಾರಂಭವಾಗಿದ್ದು, ಇವರು ಜನರ ಕಷ್ಟಗಳಿಗೆ ಸ್ಪಂಧಿಸುವುದಿಲ್ಲ. ಇವರಿಗೆ ಅಧಿಕಾರದ ವ್ಯಾಮೋಹ ಹೆಚ್ಚು ಇದೆ. ಪಕ್ಷಿಮ ಬಂಗಾಳದ ಚುನಾವಣೆಯಲ್ಲಿ ಏನೆಲ್ಲಾ ತಂತ್ರಗಾರಿಕೆ ಮಾಡಿದ್ದಾರೆಂಬುವುದು ತಿಳಿದೇ ಇದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಸಿಕೆ ಪೂರೈಸುವಲ್ಲಿ ವಿಫಲರಾಗಿದ್ದಾರೆ.
ಕೇಂದ್ರದಿಂದ ಲಸಿಕೆ ಎಲ್ಲರಿಗೂ ಉಚಿತವಾಗಿ ಸಿಗುತ್ತದೆ ಎಂದು ಹೇಳುತ್ತಾರೆ. ಆದರೆ ಲಸಿಕೆ ಅಭಾವ ಸೃಷ್ಠಿಯಾಗಿದೆ. ಇದನ್ನು ಪ್ರಶ್ನಿಸಿದರೆ ಅದಕ್ಕೆ ಒಂದು ಬಣ್ಣ ತುಂಬುವ ಮಾತುಗಳನ್ನು ಆಡುತ್ತಾರೆ. ಇವರಿಗೆ ದೇಶದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಲೇವಡಿ ಮಾಡಿದರು.
ಮಾಜಿ ಶಾಸಕ ಕೆ.ವೆಂಕಟಸ್ವಾಮಿ ಮಾತನಾಡಿ, ಗ್ರಾಮ ಮಟ್ಟದಿಂದ ರಾಜ್ಯ, ರಾಷ್ಟ್ರ , ಅಂತಾರಾಷ್ಟ್ರ ಮಟ್ಟದವರೆಗೆ ಬೆಳೆದ ನಮ್ಮಗಳ ಹಿತೈಷಿ ಸಿ.ನಾರಾಯಣಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕು. ಮುಂಬರುವ ಜಿಪಂ, ತಾಪಂ ಚುನಾವಣೆಗಳಿಗೆ ಸಜ್ಜಾಗಿ ಪಕ್ಷ ಸಂಘಟಿಸಬೇಕು ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರು ಸಿ.ನಾರಾಯಣಸ್ವಾಮಿಯವರು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಗ್ರಾಮದಿಂದ ದಿಲ್ಲಿಯ ತನಕ ಅವರು ಸಾಧನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದ್ದಾರೆ. ಇವರು ಇದೀಗ ನೂತನ ರಾಜ್ಯಾಧ್ಯಕ್ಷರನ್ನಾಗಿ ವರಿಷ್ಠರು ಗುರ್ತಿಸಿರುವುದು ಹಾಗೂ ನಮ್ಮ ಭಾಗದವರಾಗಿರುವುದು ಅಭಿನಂದನಾರ್ಹ ಎಂದರು.
ಇದೇ ಸಂದರ್ಭದಲ್ಲಿ ರಾಜೀವ್‌ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ.ನಾರಾಯಣಸ್ವಾಮಿ ಅವರನ್ನು ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್, ಉಪಾಧ್ಯಕ್ಷ ಶಾಂತಕುಮಾರ್, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ಮುಖಂಡರಾದ ಚೌಡಪ್ಪನಹಳ್ಳಿ ಲೋಕೇಶ್, ಕಾರಹಳ್ಳಿ ಜಯರಾಮ್, ಬುಳ್ಳಹಳ್ಳಿ ರಾಜಪ್ಪ, ಬೂದಿಗೆರೆ ಲಕ್ಷ್ಮಣ್ ಗೌಡ, ಖಾದಿಬೋರ್ಡ್ ಅಧ್ಯಕ್ಷ ಎಸ್.ನಾಗೇಗೌಡ, ಐದು ಹೋಬಳಿ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಇದ್ದರು
.ಗುರುಮೂರ್ತಿ ಬೂದಿಗೆರೆ
8861100990