ಪಾಲಿಕೆ ನೌಕರದಿಂದ ದಿಡೀರ್ ಪ್ರತಿಭಟನೆ ತುಮಕೂರು ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ.

ಪಾಲಿಕೆ ನೌಕರದಿಂದ ದಿಡೀರ್ ಪ್ರತಿಭಟನೆ ತುಮಕೂರು ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ.

 

 

ತುಮಕೂರು ಮಹಾನಗರ ಪಾಲಿಕೆಯ ನೀರು ಸರಬರಾಜು ನೌಕರರ ಸಂಘ, ವಾಹನ ಚಾಲಕರ ಸಂಘ, ಉದ್ಯಾನ ಮೇಲ್ವಿಚಾರಕರ ಸಂಘ ಸೇರಿದಂತೆ ಪಾಲಿಕೆಯ ವಿವಿಧ ನೌಕರರ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಅವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

 

 

ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ,ಹೊರಗುತ್ತಿಗೆ, ನೇರ ಪಾವತಿ ,ಸಮಾನ ಕೆಲಸಕ್ಕೆ ಸಮಾನ ವೇತನದ ಅಡಿಯಲ್ಲಿ ದುಡಿಯುತ್ತಿರುವ ಎಲ್ಲಾ ನೌಕರರ ಸೇವೆಯನ್ನ ಕಾಯಂ ಮಾಡಬೇಕು ಹಾಗೂ ಗುತ್ತಿಗೆ ಮುನ್ಸಿಪಲ್ ಕಾರ್ಮಿಕರಿಗೆ ನೇರ ಪಾವತಿ ಅಡಿಯಲ್ಲಿ ಸಂಬಳ ನೀಡಬೇಕು, ಸುಪ್ರೀಂಕೋರ್ಟಿನ ತೀರ್ಪಿನಂತೆ ಎಲ್ಲಾ ಕಾರ್ಮಿಕರಿಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪಾಲಿಕೆಯ ನೌಕರರು ಪ್ರತಿಭಟನೆ ನಡೆಸುತ್ತಿದ್ದು ತುಮಕೂರು ನಗರದ ಆದ್ಯಂತ ಕುಡಿಯುವ ನೀರು ಹಾಗೂ ಕಸ ವಿಲೇವಾರಿ ಸಮಸ್ಯೆ ಶುರುವಾಗಿದೆ.

 

 

ಪಾಲಿಕೆಯ ಸುಮಾರು 500ಕ್ಕೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು ಇದರಿಂದ ಪಾಲಿಕೆಯ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಇದರ ಬಿಸಿ ಮುಂದಿನ ದಿನದಲ್ಲಿ ತುಮಕೂರು ನಗರದ ಜನತೆಗೆ ತಟ್ಟುವುದು ಗ್ಯಾರಂಟಿ ಆಗಿದೆ.

 

 

 

ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಪಾಲಿಕೆಯ ನೀರು ಸರಬರಾಜು ನೌಕರರ ಸಂಘದ ಅಧ್ಯಕ್ಷ ಕುಮಾರ್ ಮಾತನಾಡಿ ತಮ್ಮ ವಿವಿಧ ಬೇಡಿಕೆಗಳು ಈಡೇರಿರುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ. ಪಾಲಿಕೆಯಲ್ಲಿ ಹಲವು ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ನೌಕರರು ಇದುವರೆಗೂ  ಕಾಯಂ  ಮಾಡಬೇಕು ನಮ್ಮ ಮನವಿಗೆ ಸರ್ಕಾರ ಸ್ಪಂದಿಸದೆ ಇರುವುದರಿಂದ ನಮ್ಮ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಇನ್ನದರೂ ಸರ್ಕಾರ ನಮ್ಮ ಮನವಿಯನ್ನು ಪುರಸ್ಕರಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ

 

 

 

 

ಪ್ರತಿಭಟನೆ ವಿಷಯ ತಿಳಿದ ಕೂಡಲೇ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಭೇಟಿ ನೀಡಿ ಪ್ರತಿಭಟನೆ ನಡೆಸುತ್ತಿದ್ದ ಪೌರಕಾರ್ಮಿಕರ ಸಮಸ್ಯೆಯನ್ನ ಆಲಿಸಿ ಸರ್ಕಾರದ ಗಮನವನ್ನು ಸೆಳೆದು ಕೂಡಲೇ ತಮ್ಮ ಬೇಡಿಕೆಗಳ ಈಡೇರಿಕಗಾಗಿ ತಾವು ಸಹ ತಮ್ಮ ಪರವಾಗಿ ನಿಲ್ಲುವುದಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದರು.

 

 

ದಿಡೀರ್ ನೌಕರರ ಪ್ರತಿಭಟನೆಯಿಂದ ನೀರು ಹಾಗೂ ಕಸ ವಿಲೇವಾರಿಯಲ್ಲಿ ವ್ಯತ್ಯಯ.

 

 

 

ಪಾಲಿಕೆಯ ನೌಕರರು ಅನಿರ್ದಿಷ್ಟಅವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ 35 ವಾರ್ಡ್ಗಳಲ್ಲಿ ನೀರು ಸರಬರಾಜು ಹಾಗೂ ಕಸ ವಿಲೇವಾರಿ ಮಾಡಲು ವ್ಯತ್ಯಯ ಉಂಟಾಗಲಿದೆ ಎನ್ನಲಾಗಿದೆ.

 

 

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version