ತುಮಕೂರು: ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನ, ಅನುದಾನದ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ, ಪರಿಶಿಷ್ಟ ಜಾತಿ/ ಪಂಗಡದವರಿಗೆ ಆದ್ಯತೆ, ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಕಾಲಮಿತಿಯಲ್ಲೇ ಕೂಲಿ ಪಾವತಿ ಸೇರಿ ಯೋಜನೆಯ ಸಮಗ್ರ ಅನುಷ್ಠಾನಕ್ಕೆ ಆದ್ಯತೆ ಕೊಡಬೇಕು ಎಂದು ಸಂಸದ ಜಿ.ಎಸ್. ಬಸವರಾಜು ಹಾಗೂ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಜಂಟಿಯಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ನಡೆದ ದಿಶಾ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ನರೇಗಾ (ಉದ್ಯೋಗ ಖಾತ್ರಿ)ಯೋಜನೆ ಅನುಷ್ಟಾನಕ್ಕೆ ತರಲಾಗಿದ್ದು, ಈ ಯೋಜನೆಯನ್ನು ಲೋಪದೋಷವಾಗದಂತೆ ಹಾಗೂ ಹಣ ದುರ್ಬಳಕೆಯಾಗದಂತೆ ಅನುಷ್ಠಾನಗೊಳಿಸಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ನರೇಗಾ ಯೋಜನೆಯಡಿ ಅನುಷ್ಟಾನಗೊಳಿಸಬಹುದಾದ ಎಲ್ಲವನ್ನೂ ಸಮಗ್ರವಾಗಿ ಅನುಷ್ಟಾನಗೊಳಿಸಿ ಈ ಯೋಜನೆ ಯಶಸ್ವಿಯಾಗುವಂತೆ ಕ್ರಮ ವಹಿಸುವಂತೆ ನಿರ್ದೇಶಿಸಿದರು.
ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅಂಗನವಾಡಿ ಮತ್ತು ಶಾಲಾ ಕಟ್ಟಡ, ಶಾಲಾ ಶೌಚಾಲಯಗಳನ್ನು ನಿರ್ಮಿಸಬೇಕು. ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ದುರಸ್ಥಿಗೊಳಿಸಬೇಕು. ಜೊತೆಗೆ ಕೆರೆ-ಕಟ್ಟೆಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಅಂತರ್ಜಲ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ರೈತರ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು. ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಪ್ರಚುರಗೊಳಿಸುವ ಕೆಲಸವಾಗಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ರಾಷ್ಟಿçÃಯ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ಎಲ್ಲಾ ವೇತನ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಯಾವುದೇ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕಾಲಮಿತಿಯೊಳಗೆ ಮನೆಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಸಂಸದ ಜಿ.ಎಸ್. ಬಸವರಾಜು ಸೂಚಿಸಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಸಂಸದರ ನಿರ್ದೇಶನದಂತೆ ನರೇಗಾ ಯೋಜನೆಯಡಿ ಅನುಷ್ಟಾನಕ್ಕಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಮುಂದಿನ ಸಭೆ ವೇಳೆಗೆ ಈಗ ಸೂಚಿಸಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಪ್ರಸ್ತುತ ಮಳೆಗಾಲ ಪ್ರಾರಂಭಗೊAಡಿರುವುದರಿAದ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಶಾಲೆಗಳಲ್ಲಿ ಗಿಡಗಳನ್ನು ನೆಡಬೇಕು ಎಂದು ನಿರ್ದೇಶಿಸಿದರು.
ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ. ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ೨೦೨೧ನೇ ಸಾಲಿಗೆ ಒಟ್ಟು ೬೨೦೦೦೦೦ ಮಾನವ ದಿನಗಳ ಸೃಜನೆ ಮಾಡುವ ಗುರಿ ಹೊಂದಲಾಗಿದ್ದು, ಈ ಪೈಕಿ ಜೂನ್ ೧೯ರವರೆಗೆ ೧೧೫೮೬೪೭ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದ ಅವರು ಯೋಜನೆಯಡಿ ಈವರೆಗೆ ಅನುಷ್ಟಾನಗೊಳಿಸಿರುವ ಕಾಮಗಾರಿಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಯಲ್ಲಿ ತುಮಕೂರು ದಿಶಾ ಸಮಿತಿ ಉತ್ತಮ ಸ್ಥಾನ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜಿಲ್ಲೆಯ ಸಂಪೂರ್ಣ ಡಾಟಾ ಮಾಹಿತಿ ಲಭ್ಯವಾಗಬೇಕು ಎಂದು ತಿಳಿಸಿಸಿದರು.
ಸಭೆಗೂ ಆರಂಭಕ್ಕೂ ಮುನ್ನ ಸಂಸದ ಜಿ.ಎಸ್. ಬಸವರಾಜು ‘ದಿಶಾ’ ಜಾಲತಾಣ ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಉಪವಿಭಾಗಾಧಿಕಾರಿ ಅಜಯ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.