ತುಮಕೂರು ಕಾಂಗ್ರೆಸ್ ನಲ್ಲೂ ಭಿನ್ನಮತ ಸ್ಫೋಟ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲು ಮುಂದಾದ್ರಾ ಶಫಿ ಅಹಮದ್..?
ತುಮಕೂರು – ಅಲ್ಪಸಂಖ್ಯಾತರ ಮೀಸಲಾತಿ ಕಡಿತದ ಅನ್ಯಾಯದ ವಿರುದ್ಧ ಕಾಂಗ್ರೆಸ್ ಪಕ್ಷ ಧ್ವನಿ ಎತ್ತುತ್ತಿಲ್ಲ ಇದರಿಂದ ನಾಡಿನ ಹಾಗೂ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದಿಂದ ಆಗಿರುವ ದೊಡ್ಡ ಅನ್ಯಾಯ ಎಂದು ತುಮಕೂರಿನ ಕಾಂಗ್ರೆಸ್ ಹಿರಿಯ ಮುಖಂಡ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಹೇಳಿಕೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಶಫಿ ಅಹಮದ್ ರವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಹೈಕಮಾಂಡ್ ನಾಯಕರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ .
ಇನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ತಾವು 40 ವರ್ಷದಿಂದ ಕಾಂಗ್ರೆಸ್ ಪಕ್ಷವನ್ನ ಜಿಲ್ಲೆಯಲ್ಲಿ ಕಟ್ಟಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷಕ್ಕಾಗಿ ನಮ್ಮ ಕುಟುಂಬ ಹಗಲಿರುಳು ಶ್ರಮಿಸಿದ್ದು ಇದುವರೆಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ದುಡಿದಿದ್ದೇವೆ ಆದರೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದಿಂದ ನಮ್ಮನ್ನ ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದಿರುವ ಅವರು.
ತಮ್ಮ ಅಳಿಯ ಡಾಕ್ಟರ್ ರಫೀಕ್ ಅಹಮದ್ ರವರು ಶಾಸಕರಾದ ಸಂದರ್ಭದಲ್ಲಿ ಹಲವು ಅನೇಕ ಸರ್ಕಾರಿ ಕಾರ್ಯಕ್ರಮಗಳನ್ನು ಕ್ಷೇತ್ರಕ್ಕೆ ಒದಗಿಸುವಲ್ಲಿ ಸಫಲರಾಗಿದ್ದಾರೆ ಆದರೆ ತುಮಕೂರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು ಇದುವರೆಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡದೇ ಇರುವುದು ತೀವ್ರ ನೋವುಂಟು ಮಾಡಿದೆ ಎಂದಿದ್ದಾರೆ.
ಇತ್ತೀಚೆಗೆ ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ರದ್ದುಪಡಿಸಿದ್ದು ಆದರೆ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ರಕ್ಷಣೆಗೆ ಸದಾ ಸಿದ್ಧವಿದೆ ಎಂದು ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್ ಪಕ್ಷ ಇಂದು ಅಲ್ಪಸಂಖ್ಯಾತರ ರಕ್ಷಣೆಗೆ ಮುಂದಾಗದೆ ಇರುವುದು ನೋವುಂಟು ಮಾಡಿದೆ ಎಂದಿದ್ದಾರೆ.
ಹಾಗಾಗಿ ಕೂಡಲೇ ಅಲ್ಪಸಂಖ್ಯಾತರಿಗೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷದ ಕಾರ್ಯಕರ್ತರು ಮುಖಂಡರು ಹಾಗೂ ಮತದಾರದೊಂದಿಗೆ ಚರ್ಚೆ ನಡೆಸಿ ತಮ್ಮ ತೀರ್ಮಾನವನ್ನು ಸ್ಪಷ್ಟಪಡಿಸುವುದಾಗಿ ತಿಳಿಸಿದ್ದಾರೆ.
ಟಿಕೆಟ್ ಕೈ ತಪ್ಪುವ ಆತಂಕ….???
ಇದುವರೆಗೂ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ತಮ್ಮ ಕುಟುಂಬ ವರ್ಗದವರಿಗೆ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ ಎನ್ನಲಾಗಿದ್ದು ಅದರ ನಡುವೆ ಇಂದು ಶಫಿ ಅಹಮದ್ ರವರು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ಪಕ್ಷಕ್ಕೂ ತಟ್ಟಲಿದೆಯ ಬಂಡಾಯದ ಬಿಸಿ…..???
ತುಮಕೂರು ಜಿಲ್ಲಾ ಬಿಜೆಪಿ ಪಕ್ಷದಲ್ಲಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಬಿಜೆಪಿ ಪಕ್ಷದಲ್ಲೂ ಸಹ ಆಕಾಂಕ್ಷಿಗಳ ಪೈಪೋಟಿ ಹೆಚ್ಚಿದಂತೆ ಕಾಂಗ್ರೆಸ್ ಪಕ್ಷದಲ್ಲೂ ಸಹ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿ ಮುಂದಾಗಿದೆ ಎನ್ನಲಾಗಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ಮುಖಂಡ ಶಾಫಿ ಅಹಮದ್ ರವರ ಹೇಳಿಕೆಯಿಂದ ಕೆಲ ಮುಖಂಡರಂತೂ ಆತಂಕದಲ್ಲಿರುವುದು ಸತ್ಯ ಎನ್ನಬಹುದು.
ವರದಿ – ಮಾರುತಿ ಪ್ರಸಾದ್ ತುಮಕೂರು