ಇಂದಿನಿಂದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಎಲ್ಲಾ ಸೇವೆ ಸ್ಥಗಿತ :
ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 4 ಬುಧವಾರದಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ನೆರೆಯ ಕೇರಳ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಕಾರಣದಿಂದ ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಕೆಲವು ಸೇವೆ ಗಳನ್ನು ಸ್ಥಗಿತ ಮಾಡಲು ಸೂಚನೆ ನೀಡಲಾಗಿದೆ.
ಆದರೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಮಿಕ್ಕಂತೆ ಅನ್ನ ಸಂತರಪಣೆ ,ಪ್ರಸಾದಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.