ಉಕ್ರೇನ ನಲ್ಲಿರುವ ವಿದ್ಯಾರ್ಥಿಗಳ ಕರೆತರಲು ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡಲಿದೆ _ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್.
ತುಮಕೂರು_ ತುಮಕೂರು ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕೆಂದು ತೆರಳಿರುವ ವಿದ್ಯಾರ್ಥಿಗಳು ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದ ಸಂದರ್ಭದಲ್ಲಿ ಈಗ ಉಕ್ರೈನೆನಲ್ಲಿ ಸಿಲುಕಿಕೊಂಡಿದ್ದು ಅಂತಹ ವಿದ್ಯಾರ್ಥಿಗಳನ್ನು ತುಮಕೂರು ಜಿಲ್ಲೆಗೆ ಕರೆತರಲು ತುಮಕೂರು ಜಿಲ್ಲಾಡಳಿತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜೊತೆ ನಿರಂತರ ಪ್ರಯತ್ನ ಮುಂದುವರೆದಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ತಿಳಿಸಿದ್ದಾರೆ.
ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ಪೋಷಕರು ಹಾಗೂ ಮುಖಂಡ ಮುರಳೀಧರ್ ಹಾಲಪ್ಪ ನೇತೃತ್ವದ ತಂಡದ ಜೊತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು ಮಾತನಾಡಿ ಇದುವರೆಗೂ ತುಮಕೂರು ಜಿಲ್ಲೆಯಿಂದ 27 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ಯುಕ್ರೇನ್ ಗೆ ತೆರಳಿದ್ದು ಒಬ್ಬ ವಿದ್ಯಾರ್ಥಿನಿ ಈಗಾಗಲೇ ತುಮಕೂರು ಜಿಲ್ಲೆಗೆ ಆಗಮಿಸಿದ್ದು ಇಂದು ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಆಗಮಿಸಲಿದ್ದಾರೆ ಉಳಿದ 24 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ತುಮಕೂರು ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆಗಳ ಜೊತೆ ನಿರಂತರ ಸಂಪರ್ಕದಲ್ಲಿ ಇರುವ ಬಗ್ಗೆ ಮಾಹಿತಿಯನ್ನು ನೀಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಕುಟುಂಬಗಳ ಜೊತೆ ತುಮಕೂರು ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಉಪವಿಭಾಗಧಿಕಾರಿ ಅಜಯ್ ನೇತೃತ್ವದ ತಂಡ ರಚಿಸಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಮಾಹಿತಿ ನೀಡಿದರು.
ಇನ್ನು ಉಕ್ರೇನ್ ನಲ್ಲಿ ಇರುವ ವಿದ್ಯಾರ್ಥಿಗಳ ಪೋಷಕರು ಕೆಲಸ ಗಂಭೀರ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ರವಾನಿಸಲಾಗುವುದು ಎಂದರು.
ವಿದ್ಯಾಭ್ಯಾಸಕ್ಕೆಂದು ತೆರಳಿರುವ ವಿದ್ಯಾರ್ಥಿಗಳು ಈಗ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವುದು ದುರದೃಷ್ಟಕರ ವಿದ್ಯಾರ್ಥಿಗಳು ಎಷ್ಟು ಮುಖ್ಯವೋ ಪೋಷಕರು ಸಹ ಅಷ್ಟೇ ಮುಖ್ಯ ಎಲ್ಲರೂ ಕೂಡ ಜಿಲ್ಲಾಡಳಿತದೊಂದಿಗೆ ಸಹಕರಿಸಲು ಪೋಷಕರಿಗೆ ಮನವಿ ಮಾಡಿದರು.
ವರದಿ _ಮಾರುತಿ ಪ್ರಸಾದ್ ತುಮಕೂರು