ಗುಬ್ಬಿ ಶಾಸಕ ಶ್ರೀನಿವಾಸ್ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿದ _ಕುಂದರನಹಳ್ಳಿ ರಮೇಶ್.

ಗುಬ್ಬಿ ಶಾಸಕ ಶ್ರೀನಿವಾಸ್ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿದ _ಕುಂದರನಹಳ್ಳಿ ರಮೇಶ್.

 

 

ತುಮಕೂರು ಸಂಸದ ಜಿ.ಎಸ್ ಬಸವರಾಜು ಹಾಗೂ ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ರವರ ನಡುವೆ ಕಳೆದ ಮೂರು ದಿನಗಳಿಂದ ವಾಕ್ಸಮರ ಮುಂದುವರೆದಿದ್ದು. ಭಾನುವಾರ ಗುಬ್ಬಿಯಲ್ಲಿ ಶಾಸಕ ಎಸ್ ಆರ್ ಶ್ರೀನಿವಾಸ್ ರವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮತ್ತೆ ಸಂಸದರ ಮೇಲೆ ಆರೋಪಗಳನ್ನು ಮಾಡಿದ್ದರು ಅದಕ್ಕೆ ಪೂರಕವೆಂಬಂತೆ ಗುಬ್ಬಿ ಶಾಸಕರ ಆರೋಪಕ್ಕೆ ಸಂಬಂಧಿಸಿದಂತೆ ಡ್ಯಾಮ್ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ದಿಶಾ ಸಮಿತಿ ಸದಸ್ಯರಾದ ಕುಂದರನಹಳ್ಳಿ ರಮೇಶ್ ರವರು ಬಿಡುಗಡೆ ಮಾಡುವ ಬಿಡುಗಡೆ ಮಾಡುವ ಮೂಲಕ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

 

ಕಳೆದ ಮೂರು ದಿನಗಳ ಹಿಂದೆ ಗುಬ್ಬಿಯಲ್ಲಿ ನಡೆದ ಶಾಸಕ ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ಏರ್ಪಟ್ಟು ಚರ್ಚೆಗೆ ಗ್ರಾಸವಾಗಿತ್ತು, ಇನ್ನು ಗುಬ್ಬಿ ಶಾಸಕ ಶ್ರೀನಿವಾಸ್ ರವರು ಸಂಸದರ ಮೇಲೆ ಹಲವು ಆರೋಪಗಳನ್ನು ಮಾಡಿ ಸಂಸದರು ತಾಲೂಕಿನಾದ್ಯಂತ ಸುಳ್ಳನ್ನು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು. ಅದಕ್ಕೆ ಸಂಬಂಧಿಸಿದಂತೆ ಇಂದು ತಾಲ್ಲೂಕಿನಲ್ಲಿ ಡ್ಯಾಮ್ ನಿರ್ಮಾಣ ಮಾಡಲು ಸಂಬಂಧಿಸಿದ ದಾಖಲೆಗಳನ್ನು ಇಂದು ಬಿಡುಗಡೆ ಮಾಡಿದ್ದಾರೆ.

 

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯ ರಮೇಶ್ ರವರು ಜಿ.ಎಸ್ ಬಸವರಾಜುರವರು ಕೇವಲ ಒಂದು ಜಿಲ್ಲೆಗೆ ಮಾತ್ರ ಸೀಮಿತವಾಗದೆ ರಾಜ್ಯಾದ್ಯಂತ ನೀರಾವರಿಗೆ ಸಂಬಂಧಿಸಿದಂತೆ ನದಿ ಜೋಡಣೆ , ರಾಜ್ಯದ ಸಮಗ್ರ ಅಭಿವೃದ್ಧಿಗೆ ಸೇರಿದಂತೆ ಊರಿಗೊಂದು ಕೆರೆ ಆ ಕೆರೆಗೆ ನದಿನೀರು ಹರಿಯಬೇಕು ಎಂದು ಸಾಕಷ್ಟು ಹೋರಾಟಗಳನ್ನ ಮಾಡಿದ್ದಾರೆ ಅದರಂತೆ ರಾಜ್ಯ ,ಸೇರಿದಂತೆ ಜಿಲ್ಲೆಯ ನೀರಾವರಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಕೇಂದ್ರ ಜಲ ಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೂ ನೀರಿನ ವ್ಯವಸ್ಥೆ ಕಲ್ಪಿಸಲು ,ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿಗಳು, ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ನೀರಾವರಿ ನಿಗಮದ ಮೂಲಕ ನೀರು ಹರಿಸಲು ನಿರಂತರ ಪ್ರಯತ್ನ ನಡೆಸಿದ್ದು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದರು.

 

ಇನ್ನು ಗುಬ್ಬಿ ಶಾಸಕ ಶ್ರೀನಿವಾಸ್ ರವರಿಗೆ ಮಾಹಿತಿಯ ಕೊರತೆ ಇದ್ದು ಅವುಗಳಿಗೆ ಪೂರಕವಾದ ದಾಖಲೆಗಳನ್ನು ಪಡೆಯುವಲ್ಲಿ ಶಾಸಕರು ವಿಫಲವಾಗಿ ಸಂಸದ ಜಿ.ಎಸ್ ಬಸವರಾಜು ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಪ್ರಚಾರಕ್ಕೆ ಮುಂದಾಗಿರುವುದು ಸರಿಯಲ್ಲ, ಜಿಲ್ಲೆಯ ಹಿರಿಯ ಸಂಸದ ಹಾಗೂ ಹಿರಿಯ ಮುತ್ಸದ್ದಿ ರಾಜಕಾರಣಿಗಳನ್ನು ಏಕವಚನದ ಮೂಲಕ ಪದೇ ಪದೇ ನಿಂದನೆ ಮಾಡುತ್ತಿರುವುದು ಸರಿಯಲ್ಲ ಕೂಡಲೇ ಶಾಸಕರು ಎಚ್ಚೆತ್ತುಕೊಳ್ಳಬೇಕು ಎಂದರು.

 

ತುಮಕೂರು ಜಿಲ್ಲೆಯ ಜಲಗುಣಿ ಬಳಿ ಡ್ಯಾಮ್ ನಿರ್ಮಾಣ ಮಾಡಲು ಮುಂದಾಗಿದ್ದು ಹಾಗೂ ಬೈರಗೊಂಡ್ಲು ಬಳಿ ಏಳು ಸಾವಿರ ಎಕರೆ ಪ್ರದೇಶದಲ್ಲಿ 5.5 ಟಿಎಂಸಿ ನೀರನ್ನು ಸಂಗ್ರಹಿಸಲು ಡ್ಯಾಮ್ ನಿರ್ಮಾಣ ಮಾಡಲಾಗುತ್ತದೆ ಎಂದರು .

ಶಾಸಕರೊಂದಿಗೆ ಚರ್ಚಿಸಲು ಸಿದ್ದ.

ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ರವರು ಮಾಡುತ್ತಿರುವ ಆರೋಪಗಳಿಗೆ ಉತ್ತರ ನೀಡಲು ಸದಾ ಸಿದ್ಧರಿದ್ದು ಅದಕ್ಕಾಗಿ ಇದೇ ತಿಂಗಳ 19ರಂದು ಶಾಸಕರ ಮನೆ ಮುಂದೆ ಧರಣಿ ನಡೆಸಲು ಹಾಗೂ ಚರ್ಚೆಗೆ ಸಿದ್ಧರಿರುವುದಾಗಿ ಅದಕ್ಕಾಗಿ ಪೊಲೀಸರ ಅನುಮತಿ ಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

 

 

ಶಾಸಕರಿಗೆ ದಾಖಲೆ ಕೊರತೆ ಇದೆ.

ಗುಬ್ಬಿ ಶಾಸಕರಿಗೆ ಹಲವು ದಾಖಲೆಗಳ ಕೊರತೆ ಎದ್ದು ಕಾಣುತ್ತಿದ್ದು 550 ಕೋಟಿ ಮೊತ್ತದ ನೀರಾವರಿ ಹಾಗೂ ಡ್ಯಾಮ್ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದು ಇನ್ನಾದರೂ ಅರಿತು ಮಾತನಾಡಬೇಕು ಇಲ್ಲವಾದರೆ ಮುಂದಿನ ದಿನದಲ್ಲಿ ಸಂಸದರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

 

ಜಿಲ್ಲೆಯ ರಾಜಕಾರಣಕ್ಕೆ ಇತಿಹಾಸವಿದೆ.

ಇನ್ನು ತುಮಕೂರು ಜಿಲ್ಲೆಯ ರಾಜಕಾರಣ ರಾಜ್ಯದ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದೆ ಹಾಗೂ ಜಿಲ್ಲೆಯ ರಾಜಕಾರಣಿಗಳು ಉತ್ತಮ ನಡವಳಿಕೆಯನ್ನು ಹೊಂದಿದ್ದಾರೆ ಅದನ್ನ ಶಾಸಕರು ಮರೆಯಬಾರದು ಎಂದರು.

 

ದಲಿತರ ಜಮೀನು ಕಬಳಿಸಿಲ್ಲ.

ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ರವರು ಗುಬ್ಬಿ ತಾಲ್ಲೂಕಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದರು ಇದಕ್ಕೆ ಪ್ರತಿಕ್ರಿಯೆ ನೀಡಿದ ರಮೇಶ್ ಯಾರು ಕೂಡ ದಲಿತರ ಜಮೀನನ್ನು ಕಬಳಿಸಲು ಸಾಧ್ಯವಿಲ್ಲ ಅದನ್ನು ಕಾನೂನು ಪ್ರಕಾರ ಕೊಂಡುಕೊಳ್ಳಲಾಗಿದೆ ಅದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ ಹಾಗೇನಾದರೂ ಕಬಳಿಸಿದ್ದೆಆದರೆ ನ್ಯಾಯಾಲಯವಿದೆ ಅದರ ಮೂಲಕ ಹೋರಾಡಲಿ ಎಂದರು.

 

ಇನ್ನು ಸಂಸದ ಜಿ ಎಸ್ ಬಸವರಾಜು ಒಡೆತನದ ವಿದ್ಯಾಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಮಾಡುವ ಮೂಲಕ ದೇಶ ವಿದೇಶಗಳಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ ಅದರ ಮೂಲಕ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ ಆದರೆ ಶಾಸಕರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

 

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಹನುಮಯ್ಯ ,ನಿಂಗಪ್ಪ ,ರಾಜಶೇಖರ್ ,ರಾಮಚಂದ್ರಪ್ಪ ಸೇರಿದಂತೆ ಇತರರು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!