ಬಿಟ್ ಕಾಯಿನ್ ಹಗರಣ ತನಿಖೆಗೆ ಒತ್ತಾಯಿಸಿದ ಡಾ. ಜಿ ಪರಮೇಶ್ವರ್.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಟ್-ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ಆಗಬೇಕು ಈ ಮೂಲಕ ಈ ಹಗರಣದಲ್ಲಿ ಯಾರೇ ಪಾಲ್ಗೊಂಡಿದ್ದರು ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿ ಪರಮೇಶ್ವರ್ ಅವರು ಗದಗದಲ್ಲಿ ತಿಳಿಸಿದ್ದಾರೆ.
ಇನ್ನು ಬಿಟ್-ಕಾಯಿನ್ ಹಗರಣ ಬಹುದೊಡ್ಡ ಹಗರಣವಾಗಿದ್ದು ಸಾವಿರಾರು ಕೋಟಿ ಹಗರಣ ನಡೆದಿದೆ ಎನ್ನಲಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಈ ಮೂಲಕ ಹಗರಣದಲ್ಲಿ ಯಾರ್ಯಾರು ಪಾಲ್ಗೊಂಡಿದ್ದಾರೆ ಎಲ್ಲರಿಗೂ ಶಿಕ್ಷೆಯಾಗಬೇಕು ಹಗರಣದಲ್ಲಿ ರಾಜಕಾರಣಿಗಳು ಉದ್ಯಮಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದ್ದು ಕೂಡಲೇ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದರು.
ಬಿಟ್-ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ತಲೆದಂಡ ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಇನ್ನು ಹಗರಣಕ್ಕೆ ಸಂಬಂಧಿಸಿದಂತೆ ಮೊದಲು ತನಿಖೆಯಾಗಬೇಕು ನಂತರ ಮುಖ್ಯಮಂತ್ರಿಗಳಾಗಲಿ ಅವರ ಸಂಬಂಧಿಕರೇ ಆಗಲಿ ಇದಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ನಿರ್ಧಾರವಾದ ತಕ್ಷಣವೇ ಸಿಎಂ ತಲೆದಂಡವಾಗಲಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಇನ್ನು ತನಿಖೆಯಲ್ಲಿ ಕಾಂಗ್ರೆಸ್ ಪಕ್ಷದವರು ಶಾಮೀಲಾಗಿದ್ದರು ಸಹ ಅವರ ಮೇಲೂ ಸಹ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿ ಎಂದು ಡಾಕ್ಟರ್ ಜಿ ಪರಮೇಶ್ವರ್ ಅವರು ಒತ್ತಾಯಿಸಿದ್ದಾರೆ.