ಬಿಜೆಪಿ ವಿರುದ್ಧ ಹರಿಹಾಯ್ದ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್

ಬಿಜೆಪಿ ವಿರುದ್ಧ ಹರಿಹಾಯ್ದ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್

 

ಇಂದು ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾಕ್ಟರ್ ಜಿ ಪರಮೇಶ್ವರ್ ರವರ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.

 

ಇನ್ನು ಪತ್ರಿಕಾಗೋಷ್ಠಿಯಲ್ಲಿ ಡಾಕ್ಟರ್ ಜಿ ಪರಮೇಶ್ವರ್ ಅವರು ಉತ್ತರಪ್ರದೇಶದ ಲಕಿಂಪೂರ್ ನಲ್ಲಿ ರೈತರ ಮೇಲೆ ಕಾರು ಹರಿಸಿದ ಪರಿಣಾಮ ಹಲವು ರೈತರು ಸಾವಿಗೀಡಾಗಿದ್ದರು. ಘಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರವರು ಲಕಿಂಪೂರ್ಗೆ ಭೇಟಿನೀಡಲು ತೆರಳಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಅವರನ್ನು ಬಂಧಿಸಿದ್ದು ನಿಜಕ್ಕೂ ಖಂಡನೀಯ.ಇದುವರೆಗೂ ಅವರನ್ನು ಕೋರ್ಟಿಗೆ ಹಾಜರು ಪಡಿಸಿದೆ ಕಾಲಹರಣ ಮಾಡಿ ಕಾನೂನುಗಳನ್ನು ಗಾಳಿಗೆ ತೂರಿ ಬಿಜೆಪಿ ಸರ್ಕಾರ ತನ್ನ ದುರಾಡಳಿತವನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಜಿ ಪರಮೇಶ್ವರ್ ಅವರು ಬಿಜೆಪಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

 

 ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ದೇಶವನ್ನು ಕೊಂಡೊಯ್ಯಬೇಕಾದ ಕೇಂದ್ರ ಸರ್ಕಾರ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಪ್ರಿಯಾಂಕಾ ಗಾಂಧಿ ರವರನ್ನ ಗೃಹಬಂಧನದಲ್ಲಿ ಇಟ್ಟು ಇಟ್ಟಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ.

 

ದಿನಕಳೆದಂತೆ ಬಿಜೆಪಿಯ ಅಂತ್ಯ ಕಾಲ ಸನಿಹವಾಗುತ್ತಿದೆ ಅದರ ದೃಷ್ಟಿಯಲ್ಲಿ ಇಂದು ಬಿಜೆಪಿ ನೇತೃತ್ವದ ಸರ್ಕಾರ ರೈತರ ಪ್ರತಿಭಟನೆ ಹಾಗೂ ಹೋರಾಟವನ್ನು ಕಸಿಯುವ ಸಲುವಾಗಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೇಳುವ ಪ್ರತಿಭಟನಾಕಾರ ಬಾಯಿಮುಚ್ಚಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ.

 

ಇದು ಬಿಜೆಪಿಯ ಅಂತ್ಯಕಾಲ. ಇನ್ನೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ನಿಜಕ್ಕೂ ಖಂಡನೀಯ ಇದರ ವಿರುದ್ಧ ಕಾಂಗ್ರೆಸ್ ಪಕ್ಷ ನಿರಂತರ ಹೋರಾಟ ನಡೆಸಲಿದೆ ಬಿಜೆಪಿಯ ದುರಾಡಳಿತವನ್ನು ಜನರು ಗಮನಿಸುತ್ತಿದ್ದು ಮುಂದಿನ ದಿನದಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸುವ ದಿನಗಳು ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರಾದ ಟಿಬಿ ಜಯಚಂದ್ರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ ಸೇರಿದಂತೆ ಹಲವಾರು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹಾ ಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version