ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯ ಪ್ರತಿಭಟನೆ.
ತುಮಕೂರು ಅಖಿಲ ಕರ್ನಾಟಕ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯ ವತಿಯಿಂದ ರಾಜ್ಯದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಒಂದು ದಿನದ ಪ್ರತಿಭಟನೆ ನಡೆಯಿತು.
ಇದರ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಸಹ ಅಖಿಲ ಕರ್ನಾಟಕ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯ ರಾಜ್ಯಾಧ್ಯಕ್ಷ ನಗುತ ರಂಗನಾಥ್ ಹಾಗೂ ಸಂಘದ ಗೌರವಾಧ್ಯಕ್ಷರಾದ ಅತಿಕ್ ಅಹಮದ್ ರವರ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇನ್ನು ಪ್ರತಿಭಟನೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಂಘಟನೆಯ ಪದಾಧಿಕಾರಿಗಳು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ್ ಯುವ ಸೈನ್ಯ ರಾಜ್ಯಾಧ್ಯಕ್ಷ ನಗುತ ರಂಗನಾಥ್ ಮಾತನಾಡಿ ಇಂದಿನ ದಿನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಇಂದ ದೇಶ ಹಾಗೂ ರಾಜ್ಯದ ಜನತೆ ತತ್ತರಿಸಿದ್ದು ಜೀವನ ನಡೆಸುವುದೇ ದುಸ್ತರವಾಗಿದೆ ಆದರೆ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಇನ್ನು ಅಕಾಲಿಕ ಮಳೆಯಿಂದ ರೈತರ ಬೆಳೆ ಹಾನಿಯಾಗಿದ್ದು ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಬೆಲೆ ಏರಿಕೆಯ ಬಿಸಿ ಹೆಚ್ಚಾಗಿದ್ದು ಕೂಡಲೇ ಸರ್ಕಾರ ಗಮನಹರಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ಪರಮೇಶ್ವರ್ ಯುವ ಸೈನ್ಯದ ರಾಜ್ಯ ಕಾರ್ಯದರ್ಶಿ ರಮೇಶ್ ಮಾತನಾಡಿ ಸುಖಿ ರಾಜ್ಯದ ಪರಿಕಲ್ಪನೆಯ ಪ್ರಕಾರ ನಮ್ಮ ಸಂವಿಧಾನದ ಆಶಯದಂತೆ ಭಾರತದ ಕಟ್ಟಕಡೆಯ ವ್ಯಕ್ತಿ ಸಹ ಸುಖವಾಗಿ ಬಾಳಬೇಕು ಆದರೆ ಬೆಲೆ ಏರಿಕೆಯಿಂದ ಕಟ್ಟಕಡೆಯ ವ್ಯಕ್ತಿ ಸಹ ಜೀವನ ಸಾಗಿಸಲು ಆಗುತ್ತಿಲ್ಲ ಆದರಿಂದ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡಬೇಕು ಎಂದು ತಿಳಿಸಿದರು.
ಇನ್ನು ಪ್ರತಿಭಟನೆಯಲ್ಲಿ ಪರಮೇಶ್ವರ ಯುವ ಸೈನ್ಯದ ತುಮಕೂರು ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಜಬಿವುಲ್ಲಾ, ನಿಧಿ ಕುಮಾರ್, ಗೋವಿಂದರಾಜು, ಸಿದ್ದಲಿಂಗಯ್ಯ, ವರದರಾಜು, ರಜಿನಿ , ಕೋರ ರಾಜು ,ರಘು ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಹಾಜರಿದ್ದರು.
ವರದಿ ಮಾರುತಿ ಪ್ರಸಾದ್ ತುಮಕೂರು