ಇ-ಸ್ವತ್ತು ತಂತ್ರಾಂಶ ಉನ್ನತೀಕರಣ: ಸಚಿವ ಕೆ.ಎಸ್.ಈಶ್ವರಪ್ಪ
ಬೆಳಗಾವಿ: ರಾಜ್ಯದಲ್ಲಿ ಇ-ಸ್ವತ್ತು ತಂತ್ರಾಂಶದಲ್ಲಿ ಎದುರಾಗಿದ್ದ ಸರ್ವರ್ ಸಮಸ್ಯೆಯನ್ನು ಈಗಾಗಲೇ ಬಗೆಹರಿಸಲಾಗಿದೆ. ಸರ್ವರ್ ಸಮಸ್ಯೆಯನ್ನು ಬಗೆಹರಿಸಲು ಅದರ ಶೇಖರಣಾ ಸಾಮಥ್ರ್ಯವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಸಾಫ್ಟ್ ವೇರ್ ನಲ್ಲಿ ಸಮಸ್ಯೆ ಎದುರಾಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ರಾಜೇಶ್ ನಾಯಕ್ ಯು. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ತಿಂಗಳು ಸರ್ವರ್ ಸಮಸ್ಯೆಯಿಂದ ಗ್ರಾಮೀಣ ಪ್ರದೇಶದಲ್ಲಿ ಇ-ಖಾತೆ ನೀಡುವಲ್ಲಿ ವಿಳಂಬವಾಗಿತ್ತು. ಅದನ್ನು ಸರಿಪಡಿಸಲಾಗಿದೆ ಎಂದರು.
ರಾಜ್ಯದಲ್ಲಿ ದತ್ತಾಂಶ ಕೇಂದ್ರದಲ್ಲಿ ಇ-ಸ್ವತ್ತು ತಂತ್ರಾಂಶಕ್ಕೆ ಸಂಬಂಧಿಸಿದಂತೆ ನಾಲ್ಕು ಶೇಖರಣಾ ಸಾಮಥ್ರ್ಯವನ್ನು ದ್ವಿಗುಣಗೊಳಿಸಲಾಗಿದೆ ಹಾಗೂ ಈ ರೀತಿಯಲ್ಲಿ ಸರ್ವರ್ ಸಮಸ್ಯೆ ಮತ್ತೊಮ್ಮೆ ಉಂಟಾಗದಂತೆ ಇಲಾಖೆ ಕ್ರಮ ವಹಿಸಿದೆ ಎಂದು ಈಶ್ವರಪ್ಪ ತಿಳಿಸಿದರು.