ಪಡಿತರ ಚೀಟಿದಾರರರಿಗೆ ಸಿಹಿ ಸುದ್ದಿ:  ಇ-ಕೆವೈಸಿ  ಅವಧಿ ವಿಸ್ತರಣೆ

ಪಡಿತರ ಚೀಟಿದಾರರರಿಗೆ ಸಿಹಿ ಸುದ್ದಿ:  ಇ-ಕೆವೈಸಿ  ಅವಧಿ ವಿಸ್ತರಣೆ

 

ಬೆಂಗಳೂರು:*ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.

 

 

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು. ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂ: 1967 ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

 

ಇನ್ನು ಕೂಡ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ  ಹೇಳಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version