ಬಹಿರಂಗ ಪ್ರಚಾರ ಅಂತ್ಯ: ಬಳಿಕ ಮನೆಮನೆ ಮತಬೇಟೆ ಕ್ಷೇತ್ರಗಳಲ್ಲಿ ಹೊರಗಿನವರಿಗೆ ನಿರ್ಬಂಧ

 ಬಹಿರಂಗ ಪ್ರಚಾರ ಅಂತ್ಯ: ಬಳಿಕ ಮನೆಮನೆ ಮತಬೇಟೆ ಕ್ಷೇತ್ರಗಳಲ್ಲಿ ಹೊರಗಿನವರಿಗೆ ನಿರ್ಬಂಧ

ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ 6 ಕ್ಕೆ ತೆರೆ ಬೀಳಲಿದ್ದು, ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

 

 

 

 

 

 

 

 

ಈ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ.

 

 

 

 

 

 

 

 

ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು.

 

ಬಹಿರಂಗ ಪ್ರಚಾರ ಮುಗಿದ ಬಳಿಕ ಸ್ಟಾರ್ ಪ್ರಚಾರಕರು,

ಮುಖಂಡರು ಕ್ಷೇತ್ರ ತೊರೆಯ ಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕ೦ಡು ಬ೦ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ

 

ಸೋಮವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ

 

 

 

 

 

 

 

ಮತದಾನ ಮುಕ್ತಾ ಯದ 48 ಗಂಟೆ ಮುಂಚೆ ಅಂತ್ಯ

ಸ್ಟಾರ್ ಪ್ರಚಾರಕರು, ಮುಖಂಡರು ಕ್ಷೇತ್ರ ಬಿಟ್ಟು ತೆರಳಬೇಕು ಸಂಜೆಯ ಬಳಿಕ ಧ್ವನಿವರ್ಧಕಗಳ ಬಳಕೆ ಮಾಡುವಂತಿಲ್ಲ.

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!