ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗು

ಬಿಜೆಪಿ ಸರ್ಕಾರ ಇದು ಭಂಡ ಸರಕಾರ , ಮಾನವೀಯತೆಯ ಇಲ್ಲದ ಸರಕಾರ ಎಂದು ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು .

 

ಮೈಸೂರು ಕಾಂಗ್ರೆಸ್ ಭವನದಲ್ಲಿಂದು ಕೆಪಿಸಿಸಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ , ಸಹಾಯ ಹಸ್ತ , ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10 ಸಾವಿರ ಕೊಡಬೇಕಿತ್ತು . ನಮ್ಮ ಸರಕಾರ ಇದ್ದಿದ್ದರೆ 10 ಸಾವಿರ ಹಣ , 10 ಕೆಜಿ ಅಕ್ಕಿ ಕೊಡ್ತಿದ್ದೆವು . ಇವರು ದುಡ್ಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ . ಇಂಥಹ ಕೆಟ್ಟ ಸರಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ . ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆಯುತ್ತಾ ಹಣ ಮಾಡುತ್ತಿದ್ದಾರೆ . ಪ್ರಧಾನಿ ಮೋದಿ ಹೇಳುವುದೆಲ್ಲಾ ಸುಳ್ಳು . ಪ್ರಧಾನಿ ಅಚ್ಚೆ ದೀನ್ ಆಯೇಗಾ ಅಂದರೆ ಕೆಟ್ಟ ದಿನ ಬರುತ್ತಿದೆ ಅಂತ ಅರ್ಥ . ಎಲ್ಲರೂ ನಾಚಿಕೆ ಆಗುವಷ್ಟು ಲಂಚ ಪ್ರಕರಣ ನಡೆಯುತ್ತಿದೆ . ಅವರದೇ ಪಾರ್ಟಿಯವರೆ ಅವರ ಸಚಿವರಿಗೆ ಹಣ ಕೊಟ್ಟು ಕೆಲಸ ತೆಗೆದುಕೊಳ್ಳುತ್ತಿದ್ದಾರೆ . 10 % ಇಲ್ಲದೆ ಯಾವ ಫೈಲ್ ಕೂಡ ಈ ಸರಕಾರದಲ್ಲಿ ಮುಂದಕ್ಕೆ ಹೋಗುತ್ತಿಲ್ಲ . ಯಡಿಯೂರಪ್ಪನದು ಸ್ವಾತಂತ್ರ್ಯ ನಂತರದ ಅತ್ಯಂತ ಕೆಟ್ಟ ಮತ್ತು ಭ್ರಷ್ಟ ಸರಕಾರ , ಈ ರಾಜ್ಯವನ್ನು ಇವರು ಹಾಳು ಮಾಡುತ್ತಾರೆ . ಯಡಿಯೂರಪ್ಪ ಎರಡೇ ವರ್ಷದಲ್ಲಿ ಒಂದೂವರೆ ಲಕ್ಷ ಕೋಟಿ ಮಾಡಿದ್ದಾರೆ . ಇನ್ನು ಈ ಸರಕಾರ ಮುಂದುವರಿದರೆ ಎಷ್ಟು ಸಾಲ ಮಾಡಬಹುದು ಲೆಕ್ಕ ಹಾಕಿ . ಈ ಸರಕಾರ ಬೇಕಾ ಎಂದು ಕಿಡಿಕಾರಿದರು .

 

ಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು . ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು . ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದರು..

 

ಕಾಂಗ್ರೆಸ್ ಎಂದರೆ ಒಂದು ಚಳವಳಿ , ಬಡವರ ಪಕ್ಷ . ನಾವು ನೊಂದವರ ಪರ , ಅನ್ಯಾಯಕ್ಕೆ , ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ . ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ . 17 ಶಾಸಕರನ್ನು ಖರೀದಿಸಿ ಸರ್ಜಾರ ರಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆ . ಕೊರೊನಾ ಮೂರನೇ ಅಲೆ ಸೆಪ್ಟೆಂಬರ್ , ಅಕ್ಟೋಬರ್ ನಲ್ಲಿ ಬರುವ ಮಾಹಿತಿ ಇದೆ . ಒಂದು , ಎರಡನೇ ಅಲೆಯಲ್ಲಿ ನಮಗೇನೂ ಆಗಿಲ್ಲ ಎಂದು ಜನ ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡಬಾರದು . ಇದು ದೊಡ್ಡ ಸಾಂಕ್ರಾಮಿಕ ರೋಗ , ಅದರಿಂದ ದೂರ ಇರಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು . ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ . ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಮರಣ ಹೊಂದಿದ್ದಾರೆ . ಮೂರೂವರೆ ಲಕ್ಷ ಮಂದಿ ಸತ್ತಿರಬಹುದು . ಪ್ರಧಾನಿ ನರೇಂದ್ರ ಮೋದಿಯವರು ಅಚ್ಛೇ ದಿನ್ ಬರುತ್ತದೆ ಎಂದರೆ ಕೆಟ್ಟ ದಿನಗಳು ಮುಂದೆ ಕಾದಿವೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದರು . ಯಡಿಯೂರಪ್ಪ ಅವರು ಈಗಾಗಲೇ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ . ಜನರಿಗೆ ಒಳ್ಳೆಯದಾಗಬೇಕಾದರೆ ಈ ಸರ್ಕಾರ ತೊಲಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು , ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್ , ಡೀಸೆಲ್ ಮಾರಾಟದ ಮೇಲೆ ವಸೂಲಿ ಮಾಡಿರುವ ತೆರಿಗೆ ಒಂದು ಲಕ್ಷ ಇಪ್ಪತ್ತು ಸಾವಿರ ಕೋಟಿ . ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್ , ಡೀಸೆಲ್ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು . ಬಿಜೆಪಿ ಎಂದರೆ ತಿಗಣೆ ಇದ್ದಂತೆ . ಜನರ ರಕ್ತ ಹೀರುವುದು ಅವರ ಕೆಲಸ , ಆದರೆ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ.ಸತ್ತವರ ಲೆಕ್ಕ ಸುಳ್ಳೇಳುತ್ತಿದ್ದಾರೆ . ಅದಕ್ಕಾಗಿ ಜನರನ್ನು ತಲುಪತಕ್ಕ ಒಂದು ಕೆಲಸವನ್ನು ಹಮ್ಮಿಕೊಂಡಿದ್ದು , ಸಹಾಯ ಹಸ್ತ ಅಂತ ಕರೆಯುವುದು , ಜನರ ಬಳಿ ಹೋಗಬೇಕು . ಕಾರ್ಯಕರ್ತರು ಮನೆ ಮನೆಗೆ ಹೋಗಿ ಅವರಿಗೆ ಸಾಂತ್ವನ ಹೇಳಿ ಅವರ ಕಷ್ಟ ಸುಖ ಕೇಳಿ , ಅವರಿಗೆ ಕಾಯಿಲೆ ಬಂದಿತ್ತಾ ? ಕಾಯಿಲೆ ಬಂದ ಮೇಲೆ ಸತ್ತೋಗಿದ್ದಾರಾ ? ಅವರಿಗೆ ಉದ್ಯೋಗ ಇತ್ತಾ ? ಅವುಗಳ ಮಾಹಿತಿ ಪಡೆಯಲು ಇದೆಲ್ಲ ಮಾಡುತ್ತಿದ್ದಾರೆ . ಸಹಾಯ ಬೇಕಾದಲ್ಲಿ ಸಹಾಯ ಹಸ್ತ ನೀಡುತ್ತಾರೆ ಎಂದರು .

 

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ , ಮಾಜಿ ಸಚಿವರಾದ ಡಾ . ಹೆಚ್.ಸಿ. ಮಹದೇವಪ್ಪ , ರಮಾನಾಥ ರೈ , ಶಾಸಕರಾದ ಮಂಜುನಾಥ್ , ಮಾಜಿ ಶಾಸಕರಾದ ವಾಸು , ಸೋಮಶೇಖರ್ , ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ , ಹೆಚ್.ಎ.ವೆಂಕಟೇಶ್ , ಮೈಸೂರು ನಗರ ಅಧ್ಯಕ್ಷ ಮೂರ್ತಿ , ಗ್ರಾಮಾಂತರ ಸಮಿತಿ ಅಧ್ಯಕ್ಷ ಡಾ . ವಿಜಯಕುಮಾರ್ ಮತ್ತಿತರರು ಹಾಜರಿದ್ದರು .

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version