ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ,ದಿನಗೂಲಿ ನೌಕರರಿಗೆ ಹಾಗೂ ಖಾಸಗಿ ನೌಕರರಿಗೆ ತೀವ್ರ ತೊಂದರೆ ಉಂಟಾಗಿದ್ದು ಓಡಾಡಲು ವಾಹನ ವಿಲ್ಲದ ಸಾರ್ವಜನಿಕರು ಪರದಾಡುತ್ತಿದ್ದಾರೆ.
ಕೋವಿಡ್ 19 ರ ಸಮಯದಲ್ಲಿ ಆರ್ಥಿಕ ನಷ್ಟದಲ್ಲಿದ್ದ ಸಾರಿಗೆ ಸಂಸ್ಥೆಯು ತನ್ನ ನೌಕರರಿಗೆ ವೇತನ ನೀಡಿ ಕುಟುಂಬ ನಿರ್ವಹಣೆ ಮಾಡಲು ಅನುಕೂಲ ಮಾಡಿಕೊಟ್ಟು ಸರ್ಕಾರ ಅವರಿಗೆ ಸ್ಪಂದಿಸಿತ್ತು ಆದರೆ ಇಂದಿನ ದಿನಗಳಲ್ಲಿ ಕೋರೋನ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಸಮಯದಲ್ಲಿ ನೌಕರರು ನಡೆಸುತ್ತಿರುವ ಮುಷ್ಕರ ತೀವ್ರ ನೋವುಂಟು ಮಾಡಿದೆ. ಕೆಲ ಮುಖಂಡರ ಮಾತು ಕೇಳಿ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಿದ್ದು ಶೇಕಡ 8ರಷ್ಟು ಸಂಬಳವನ್ನು ಹೆಚ್ಚಳ ಮಾಡಲು ಸಮ್ಮತಿ ಸೂಚಿಸಿದ್ದರು ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ. ಇನ್ನೆರಡು ದಿನಗಳಲ್ಲಿ ಹಬ್ಬ ಹತ್ತಿರವಾಗುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೂಡಲೇ ನಿರುದ್ಯೋಗಿ ಯುವಕರು ಹಾಗೂ ನುರಿತ ವಾಹನ ಚಾಲಕರನ್ನು ತಾತ್ಕಾಲಿಕವಾಗಿ ಸೇವೆಗೆ ತೆಗೆದುಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ