ಸಾರ್ವತ್ರಿಕ ಚುನಾವಣೆ ಹಿನ್ನೆಲೆ 14 ರೌಡಿಗಳ ಗಡಿಪಾರು- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ವಾಡ್.
ತುಮಕೂರು – ಮುಂಬರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 14 ಮಂದಿಯನ್ನ ಗುರುತಿಸಿ ಚುನಾವಣೆಯ ಹಿತದೃಷ್ಟಿಯಿಂದ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಡ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿರುವ ಅವರು ಚುನಾವಣೆ ನ್ಯಾಯ ಸಮ್ಮತ ಹಾಗೂ ನಿರ್ಭೀತಿಯಿಂದ ನಡೆಯುವ ಸಂಬಂಧವಾಗಿ ಜಿಲ್ಲೆಯಿಂದ 14 ಮಂದಿಯನ್ನ ಗಡಿಪಾರು ಮಾಡಲಾಗಿದ್ದು ಓರ್ವ ನ ಮೇಲೆ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದಿದ್ದಾರೆ.
ಚುನಾವಣಾ ಆಕ್ರಮಕ್ಕೆ ಸಹಕರಿಸಿದರೆ ಇಲಾಖಾ ಸಿಬ್ಬಂದಿ ಮೇಲೆ ಕಠಿಣ ಕ್ರಮ.
ರಾಜ್ಯದಲ್ಲಿ ನಿಗದಿಯಾಗಿರುವ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಲ್ಲೂ ಸಹ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಚುನಾವಣಾ ಅಕ್ರಮಕ್ಕೆ ಸಹಕರಿಸಿದರೆ ಅಂತಹ ಸಿಬ್ಬಂದಿ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಅಂತಹ ಸಿಬ್ಬಂದಿಗಳ ಮಾಹಿತಿಯನ್ನು ಜಿಲ್ಲಾ ಚುನಾವಣಾ ಶಾಖೆ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಕ್ರಮ ಅಂತಹ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ವರದಿ -ಮಾರುತಿ ಪ್ರಸಾದ್ ತುಮಕೂರು