ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಬೆಂಗಳೂರಿನಲ್ಲಿ 4,500 ಐಸಿಯು ಬೆಡ್ಗಳನ್ನು ಸಿದ್ಧಪಡಿಸಿಕೊಳ್ಳಿ ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ.
ಈಗಾಗಲೇ ಎರಡನೇ ಅಲೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಮತ್ತೆ ಮೂರನೇ ಅಲೆ ಬರುವ ಎಲ್ಲಾ ಮುನ್ಸೂಚನೆಯನ್ನು ತಜ್ಞರು ನೀಡಿದ್ದು.
ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ ಹೆಚ್ಚು ಜವಾಬ್ದಾರಿಯಿಂದ ಇರಬೇಕು ಅಂತ ರಾಜ್ಯ ಸರ್ಕಾರಕ್ಕೆ ಈಗಾಗಲೇ ತಿಳಿಸಿದೆ. ಮೂರನೇ ಅಲೆ ಎದುರಿಸಲು ಐಸಿಯು ಬೆಡ್ ಸಿದ್ಧಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 4,500 ಐಸಿಯು ಬೆಡ್ಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೀಗ ತಜ್ಞರು ಸಲಹೆ ನೀಡಿದ್ದಾರೆ. ಅಕ್ಟೋಬರ್ ಅಥವಾ ನವೆಂಬರ್ನಿಂದ ಮೂರನೇ ಅಲೆ ಸಾಧ್ಯತೆಯಿದೆ. ಎರಡನೇ ಅಲೆಯ ವೇಳೆಯಲ್ಲಿ ಮಾಡಿದಂತೆ ಬೇಜವಾಬ್ದಾರಿ ಮಾಡಬೇಡಿ. ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಸಾವು-ನೋವು ಹೆಚ್ಚಾಗುತ್ತದೆ. ರಾಜ್ಯದಲ್ಲಿ ಸದ್ಯ 1,300 ಐಸಿಯು ಬೆಡ್ಗಳು ಲಭ್ಯವಿದೆ.
ಇದರ ಜೊತೆ ಬೆಂಗಳೂರನ್ನು ಹೊರತುಪಡಿಸಿ 1 ಸಾವಿರ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಿಕೊಳ್ಳಿ ಎಂದು ತಜ್ಞರು ಹೇಳಿದ್ದಾರೆ.ರಾಜ್ಯಾದ್ಯಂತ ಈಗಲೇ ಎಚ್ಚೆತ್ತುಕೊಂಡರೆ ಒಳಿತು