ಉತ್ತಮ ಮಳೆಯಿಂದ ಕೆರೆಗಳ ಬರ್ತಿಯಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ _ಶಾಸಕ ಡಿ.ಸಿ ಗೌರಿ ಶಂಕರ್.

ಉತ್ತಮ ಮಳೆಯಿಂದ ಕೆರೆಗಳ ಬರ್ತಿಯಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ _ಶಾಸಕ ಡಿ.ಸಿ ಗೌರಿ ಶಂಕರ್.

 

 

ತುಮಕೂರು_ಈ ಬಾರಿ ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಅದರಲ್ಲೂ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಹುತೇಕ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿದ್ದು ಈ ಮೂಲಕ ರೈತರ ಮುಖದಲ್ಲಿ ಮಂದಹಾಸ ಮೂಡಿ ಇತಿಹಾಸ ಸೃಷ್ಟಿ ಮಾಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ತಿಳಿಸಿದ್ದಾರೆ.

 

 

ತುಮಕೂರು ತಾಲೂಕಿನ ಗೂಳೂರಿನ ಗಣೇಶ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತುಮಕೂರು ತಾಲೂಕಿನ ಬಹುತೇಕ ಕೆರೆಗಳು ಈ ಬಾರಿ ಮಳೆಯಿಂದ ತುಂಬಿ ಕೋಡಿ ಬಿದ್ದಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

 

 

 

ಇನ್ನು ಇದೇ ಸಂದರ್ಭದಲ್ಲಿ ಶಾಲೆಯ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು ತುಮಕೂರು ತಾಲೂಕಿನ ಗೂಳೂರು ಕ್ಷೇತ್ರದ ಜೆಡಿಎಸ್ ಅಧ್ಯಕ್ಷರಾದ ಪಾಲನೆತ್ರಯ ರವರು ಗೂಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ ಎಂದ ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣವನ್ನು ಪ್ರೋತ್ಸಾಹಿಸುತ್ತಿರುವ ಅವರ ಕಾರ್ಯಕ್ಕೆ ಅಭಿನಂದನೆಗಳನ್ನ ಸಲ್ಲಿಸಿದರು ಪಾಲನೆತ್ರಯ್ಯ ರವರು ಗೂಳೂರು ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಆ ಮೂಲಕ ಗೂಳೂರು ಬಾಗದ ಜನತೆಯ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತಿರುವ ಇಂತಹ ಮುಖಂಡರ ಅವಶ್ಯಕತೆ ಸಮಾಜಕ್ಕೆ ಅತ್ಯಾವಶ್ಯಕ ಎಂದರು.

 

ಇದೇ ಸಂದರ್ಭದಲ್ಲಿ ಮಾತನಾಡಿದ ಮತ್ತೋರ್ವ ಮುಖಂಡ ಹಾಗೂ ಗೂಳೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರು ಹಾಗೂ ಜೆಡಿಎಸ್ ಮುಖಂಡರಾದ ಪಾಲನೆತ್ರೆಯರವರ ಸಹಕಾರದಿಂದ ಗೂಳೂರು ಕ್ಷೇತ್ರದಲ್ಲಿ ಸಾಕಷ್ಟು ಜನಪರ ಹಾಗೂ ಸಮಾಜಮುಖಿ ಕೆಲಸಗಳು ನಡೆಯುತ್ತಿವೆ ಎಂದರು.ಇನ್ನು ಶಾಸಕ ಗೌರಿಶಂಕರ್ ಅವರು ಗೂಳೂರು ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ರ ಮುನ್ನಡೆಸುತ್ತಿದ್ದಾರೆ ಎಂದರು.

 

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಪಾಲನೇತ್ರಯ್ಯ ರವರು ವಿದ್ಯಾರ್ಥಿಗಳಲ್ಲಿ ಶಿಸ್ತು ಮುಖ್ಯ ತಾವು ಕೂಡ ಶ್ರೀಮಠದ ವಿದ್ಯಾರ್ಥಿಯಾಗಿದ್ದು ವಿದ್ಯಾರ್ಥಿಗಳ ಕಷ್ಟಗಳ ಬಗ್ಗೆ ತಮಗೂ ಸಹ ಅರಿವಿದ್ದು ವಿದ್ಯಾರ್ಥಿಗಳ ಕಷ್ಟ ಸುಖದಲ್ಲಿ ಭಾಗಿಯಾಗುವ ಮೂಲಕ ಅವರ ಶಿಕ್ಷಣವನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

 

 

 

 

ಇದೇ ಸಂದರ್ಭದಲ್ಲಿ ಮುಖಂಡರಾದ ರಂಗಸ್ವಾಮಿ ಚಂದ್ರಪ್ಪ ,ಸಾಧಿಕ್, ವಿಜಯ ಕುಮಾರಿ, ಕಲಾವತಿ ,ಗಂಗಣ್ಣ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

 

ವರದಿ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version