ಜಿಲ್ಲಾಧಿಕಾರಿ ಆಪ್ತಸಹಾಯಕ ಹೇರಂಭ ವರ್ಗಾವಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ…..
ತುಮಕೂರು _ಹಲವಾರು ವರ್ಷಗಳಿಂದ ಒಂದೇ ಜಾಗದಲ್ಲಿ ಠಿಕಾಣಿ ಹೂಡಿರುವ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹೇರಂಬ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೇರುಬಿಟ್ಟಿರುವ ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ಉಪವಾಸ ಸತ್ಯಾಗ್ರಹ ಆರಂಭಿಸಿದೆ.
ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷ ಹೆಚ್ ಜಿ ರಮೇಶ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಆರಂಭವಾಗಿದ್ದು ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹಲವಾರು ವರ್ಷಗಳಿಂದ ತಿಕಾಣೆ ಹೂಡಿರುವ ಆಪ್ತ ಸಹಾಯಕ ಹೇರಂಬ ಹಾಗೂ ಬೇರು ಬಿಟ್ಟಿರುವ ಅಧಿಕಾರಿಗಳ ವರ್ಗಾವಣೆಯಾಗುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರಿಸುವುದಾಗಿ ಎಚ್ಚರಿಕೆ ರವಾನಿಸಿದ್ದಾರೆ ಇದೆ ವೇಳೆ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ ಹೆಚ್ ಜಿ ರಮೇಶ್ ಮಾತನಾಡಿ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಆಪ್ತ ಸಹಾಯಕ ಹೇರಂಭ ಹಲವಾರು ವರ್ಷಗಳಿಂದ ಒಂದೇ ಜಾಗದಲ್ಲಿ ಠಿಕಾಣಿ ಹೂಡಿದ್ದಾರೆ, ಅದೇ ರೀತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಲವಾರು ಅಧಿಕಾರಿಗಳು ವರ್ಗಾವಣೆಯಾಗದೆ ಬೇರು ಬಿಟ್ಟಿದ್ದಾರೆ, ಇವರ ವರ್ಗಾವಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು ಸಹ ಕ್ರಮಕ್ಕೆ ಮುಂದಾಗುತ್ತಿಲ್ಲ,ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಗಮನ ಸೆಳೆದರೂ ಸಹ ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿದ ಜಿಲ್ಲಾಧಿಕಾರಿಗಳು ಬಳಿಕ ತಿರುಗಿಯೂ ನೋಡಲಿಲ್ಲ ಜಿಲ್ಲಾಧಿಕಾರಿಗಳೂ ಸಹ ಭ್ರಷ್ಟರ ರಕ್ಷಣೆಗೆ ನಿಂತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂವಿದಾನ ಜಾಗೃತಿ ಜಾಥಾ ಬಗ್ಗೆ ಜಿಲ್ಲಾಧಿಕಾರಿಗಳು ಬಹುಮಾನ ಪಡೆದಿದ್ದಾರೆ, ಆದರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಸಂವಿದಾನ ನಿಯಮಾವಳಿ ಉಲ್ಲಂಘನೆಯಾಗುತ್ತಿದೆ, ಇವರು ಪ್ರಶಸ್ತಿ ಪಡೆದಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಖಾರವಾಗಿ ಪ್ರಶ್ನಿಸಿದರು.
ಭ್ರಷ್ಟರ ರಕ್ಷಣೆಗೆ ನಿಂತಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹೇರಂಭನ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಭ್ರಷ್ಟರ ವರ್ಗಾವಣೆಯಾಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದರು
ಇದೇ ವೇಳೆ ಉಪವಾಸ ಸತ್ಯಾಗ್ರಹದಲ್ಲಿ ವಿಷ್ಣುವಿಜಯ,ರಾಜಶೇಖರ,ನರಸಿಂಹ ಗೌಡ ,ಸುನಿಲ್ ಕುಮಾರ್, ಪ್ರದೀಪ್,ನರಸಿಂಹ ಮೂರ್ತಿ,ಕೃಷ್ಣ ರೆಡ್ಡಿ,ನರಸಿಂಹ ರೆಡ್ಡಿ, ಮಂಜುನಾಥ್, ದೊರೆಸ್ವಾಮಿ,ಚಂದ್ರು ಉಪಸ್ಥಿತರಿದ್ದರು.