ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು.

ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು.

 

ತುಮಕೂರು_ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಗರದಲ್ಲಿ ನಡೆದಿದೆ.

 

 

 

ಮೃತಪಟ್ಟ ಯುವತಿ ಮೈಸೂರು ಮೂಲದ ಕವಿತಾ (21)ಎಂದು ತಿಳಿದುಬಂದಿದ್ದು ತುಮಕೂರಿನ ಎಸ್. ಎಸ್. ಐ .ಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

 

 

ಇನ್ನು ಮೃತಪಟ್ಟ ಯುವತಿ ಕವಿತಾ ಶುಕ್ರವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು ಘಟನೆ ತಿಳಿದ ಕೂಡಲೇ ಹಾಸ್ಟೆಲ್ ಗೆ ಕಾಲೇಜು ಪ್ರಾಂಶುಪಾಲರು, ಪ್ರಾಧ್ಯಾಪಕರು, ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 

 

ಇನ್ನು ಮೃತಪಟ್ಟ ಯುವತಿಯ ಪೋಷಕರು ತುಮಕೂರಿಗೆ ಆಗಮಿಸಿದ್ದು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

 

 

 

ಇನ್ನು ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ. ಇನ್ನು ಮೃತದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

ಶೈಕ್ಷಣಿಕ ನಗರಿ ಎಂದೇ ಪ್ರಸಿದ್ಧವಾಗಿರುವ ತುಮಕೂರಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಸಾರ್ವಜನಿಕ ವಲಯ ತತ್ತರಿಸಿದ ಇತ್ತೀಚಿಗೆ ತುಮಕೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಪಿಯು ಕಾಲೇಜಿನಲ್ಲಿ ಓರ್ವ  ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!