ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಹಲವು ಗೊಂದಲಗಳು ಹಾಗೂ ಕರೋನದ ಕಾರ್ಮೋಡದ ನಡುವೆ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಇಂದು ತುಮಕೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿದೆ .
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ ಮಾಡಲೇಬೇಕು ಎಂದು ಹಟಕ್ಕೆ ಬಿದ್ದಿದ್ದ ಸರ್ಕಾರ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯ ಮೊದಲ ದಿನ ಎಂದು ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಇಂದು ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾಲ್ಗೊಂಡರು.
ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ,ಪೋಷಕರಲ್ಲಿ ಆತಂಕ ಹಾಗೂ ಕರೋನಾ ಕಾರ್ಮೋಡ ಸೇರಿದಂತೆ ಹಲವು ಗೊಂದಲಗಳ ನಡುವೆ ಇಂದು ತುಮಕೂರು ಜಿಲ್ಲೆಯಲ್ಲಿ ಸಹ ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯಗೊಂಡಿದೆ.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಾಜ್ಯ ಸರ್ಕಾರ ಹಲವು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸಾಮಾಜಿಕ ಅಂತರ ಕಾಪಾಡುವುದು ,ಮಾಸ್ಕ್ ,ಸ್ಯಾನಿಟೇಷನ್ ಸೇರಿದಂತೆ ಹಲವು ಅಗತ್ಯ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಿದ್ದು .
ಇಂದು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಧೈರ್ಯ ತುಂಬುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು ಈ ಬಾರಿಯ ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ ಇದಕ್ಕೆ ಸಹಕರಿಸಿದ ಸಿಬ್ಬಂದಿವರ್ಗಗಳು ಹಾಗೂ ಪ್ರತ್ಯಕ್ಷ-ಪರೋಕ್ಷವಾಗಿ ಸಹಕರಿಸಿದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಧುಸ್ವಾಮಿ ಅವರ ವಿಶೇಷ ಕಾಳಜಿ ಹಾಗೂ ಅಧಿಕಾರಿಗಳ ಶ್ರಮದಿಂದ ಇಂದು ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಂಪೂರ್ಣ ಸನಿಟೈಸೇಶನ್ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಪರೀಕ್ಷೆಯನ್ನು ನಡೆಸಲಾಗಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗಿದೆ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವಲ್ಲಿ ತುಮಕೂರು ಜಿಲ್ಲಾಧಿಕಾರಿಗಳಾದ y s ಪಾಟೀಲ್ ಅವರು ಯಶಸ್ವಿಯಾಗಿದ್ದಾರೆ.