ಆಟೋ ಚಾಲಕರಿಗೆ ಹಾಗೂ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ.

 

ಕರೋನ ಸಂಕಷ್ಟದಲ್ಲಿ ಎಲ್ಲರೂ ಜಾತಿ ,ಪಕ್ಷಬೇಧ ಮರೆತು ಬಡ ಕುಟುಂಬಗಳಿಗೆ ನೆರವಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ ಎಂ ಗೌಡರವರು ತಿಳಿಸಿದರು.

 

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹಳೆ ಕಡಲೆ ಕಾಯಿ ಮಂಡಿ ಮೈದಾನದಲ್ಲಿ ಬಿಜೆಪಿಯ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ನೇತೃತ್ವದಲ್ಲಿ ಆಟೋ ಚಾಲಕರಿಗೆ, ಸವಿತಾ ಸಮಾಜದ ಹಾಗೂ ಪೌರಕಾರ್ಮಿಕರಿಗೆ ಉಚಿತ ದಿನಸಿ ಕಿಟ್ ವಿತರಿಸಲಾಯಿತು.

 

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸಂಸದರಾದ ನಾರಾಯಣಸ್ವಾಮಿ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್,, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಕೆ ಎಸ್ ನವೀನ್, ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷರಾದ ಎ. ಮುರುಳಿ, ತಾಲೂಕು ಬಿಜೆಪಿ ಅಧ್ಯಕ್ಷರಾದ ವಿಶ್ವನಾಥ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀಸೆ ಮಹಾಲಿಂಗಪ್ಪ, ಐಮಂಗಲ ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಜೇಶ್ವರಿ ,ಹಿರಿಯ ಮುಖಂಡರಾದ ಲಕ್ಷ್ಮಿಕಾಂತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!