ತುಮಕೂರು ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ದಿನಸಿ ಕಿಟ್ ವಿತರಣೆ

ತುಮಕೂರು ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ದಿನಸಿ ಕಿಟ್ ವಿತರಣೆ

ಕರೋನಾ ಎರಡನೇ ಅಲೆಯಲ್ಲಿ ಸಾಕಷ್ಟು ಬಡ ಕುಟುಂಬಗಳು, ಕಾರ್ಮಿಕ ಕುಟುಂಬಗಳು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಹಲವು ವರ್ಗಗಳು ಕರೋನ ಸಾಂಕ್ರಾಮಿಕ ರೋಗಕ್ಕೆ ಸಿಲುಕಿ ನಲುಗಿದ್ದು ಇಂತಹ ಬಡಕುಟುಂಬಗಳಿಗೆ ನೆರವಾಗ ಬೇಕಾಗಿದ್ದು ಎಲ್ಲರ ಕರ್ತವ್ಯ ಎಂದು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ತಿಳಿಸಿದರು.

ತುಮಕೂರಿನ ಪ್ರವಾಸಿ ಮಂದಿರದಲ್ಲಿ ತುಮಕೂರು ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತುಮಕೂರು ನಗರದ ಸುಮಾರು 500 ಬೀದಿಬದಿ ವ್ಯಾಪಾರಿಗಳು ಹಾಗೂ ಬಡ ಕುಟುಂಬಗಳಿಗೆ ಕಾರ್ಮಿಕ ಇಲಾಖೆ ವತಿಯಿಂದ ನೀಡಿದ್ದ ದಿನಸಿ ಕಿಟ್ ವಿತರಿಸಿ ಮಾತನಾಡಿದರು. ಇನ್ನೂ ಕರ್ನಾಟಕ ಸರ್ಕಾರ ಕರೋನ ಸಂಕಷ್ಟಕ್ಕೆ ಸಿಲುಕಿರುವ ಹಲವು ಅಸಂಘಟಿತ ಕಾರ್ಮಿಕ ವಲಯ ಹಾಗೂ ಬಡ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು ಅದರ ಸದುಪಯೋಗವನ್ನು ಪಡೆಯುವಂತೆ ಸಲಹೆ ನೀಡಿದರು.

ತುಮಕೂರು ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಭದ್ರೆಗೌಡ ಮಾತನಾಡಿ ಕರೋನ ಸಂಕಷ್ಟಕ್ಕೆ ನಲುಗಿದ್ದ ಕುಟುಂಬ ಗಳಿಗೆ ಕಾರ್ಮಿಕ ಇಲಾಖೆ ಹಾಗೂ ಸಚಿವ ಶಿವರಾಮ್ ಹೆಬ್ಬಾರ್ ಅವರ ವಿಶೇಷ ಕಾಳಜಿಯಿಂದ ತುಮಕೂರು ನಗರಕ್ಕೆ ಸುಮಾರು ಐನೂರು ದಿನಸಿ ಕಿಟ್ ಗಳನ್ನು ತರಲಾಗಿದ್ದು ತುಮಕೂರು ನಗರದ ಬೀದಿ ಬದಿ ವ್ಯಾಪಾರಿಗಳು ಹಾಗೂ ಸಂಘದ ನೊಂದಾಯಿತ ಸದಸ್ಯರಿಗೆ ದಿನಸಿ ಕೀಟ್ಗಳನ್ನು ವಿತರಿಸಲಾಗುತ್ತಿದ್ದು ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಅರ್ಪಿಸಿದರು.

 

ಇದೇ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆ ಸದಸ್ಯರಾದ ಗಿರಿಜಾ ಧನಿಯಕುಮಾರ್, ತುಮಕೂರು ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಅಲ್ತಾಫ್, ಉಪಾಧ್ಯಕ್ಷರಾದ ಮಂಜುನಾಥ್, ಟಿವಿಸಿ ಸದಸ್ಯರಾದ ಜಗದೀಶ್, ಲೋಕೇಶ್ ರೇಣುಕಪ್ಪ ಸೇರಿದಂತೆ ಹಲವರು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!