ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ_ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ.
ತುಮಕೂರು_ ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ಖಂಡಿತ ಇದರಲ್ಲಿ ಯಡಿಯೂರಪ್ಪ ಅವರೂ ಸಹ ರಾಹುಲ್ ಗಾಂಧಿ ಆದರೂ ಸಹ ಎಲ್ಲರೂ ಒಂದೇ ಇನ್ನು ರಾಹುಲ್ ಗಾಂಧಿ ಅವರನ್ನು ಇ. ಡಿ ವಿಚಾರಣೆ ಮಾಡುತ್ತಿದೆ ಈ ಸಂಬಂಧ ಯಾರೇ ತಪ್ಪು ಮಾಡಿದ್ದರು ಸಹಜವಾಗಿಯೇ ಯಾರಿಗೆ ಏನು ಶಿಕ್ಷೆಯಾಗಬೇಕು ಶಿಕ್ಷೆಯಾಗಲಿದೆ ಇಲ್ಲವಾದರೆ ಅವರು ಆರೋಪ ಮುಕ್ತವಾಗಿ ಬರಲಿದ್ದಾರೆ .ನ್ಯಾಷನಲ್ ಹೆರಾಡ್ಸ್ ಸಂಬಂಧ ಇ.ಡಿ ಇಲಾಖೆಗೆ ಅನುಮಾನ ಬಂದಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ನಂತರ ಪತ್ರಕರ್ತರೊಂದಿಗೆ ಮಾತನಾಡಿದ್ದು ಇನ್ನೂ ರಾಜ್ಯದ ಹಲವು ಮುಖಂಡರು ಬಿಜೆಪಿ ಪಕ್ಷದ ಕಡೆ ಮುಖ ಮಾಡಿದ್ದು ಪಕ್ಷಕ್ಕೆ ಬರುವವರನ್ನು ಬೇಡ ಎನ್ನಲು ಆಗುವುದಿಲ್ಲ ಎಂದರು.
ಆ ನಿಟ್ಟಿನಲ್ಲಿ ವಾರಕ್ಕೊಂದು ಜಿಲ್ಲೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡಿ ಎಲ್ಲ ವರ್ಗದ ಜನರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ .
ರಾಜ್ಯದಲ್ಲಿ ಹಲವರು ಪಕ್ಷಕ್ಕೆ ಬರಲು ಮುಂದಾಗಿದ್ದು ಯಾರು ಪಕ್ಷಕ್ಕೆ ಬರಲು ಮುಂದಾಗಿದ್ದಾರೆ ಅಂತವರನ್ನು ಪಕ್ಷಕ್ಕೆ ಬರಮಾಡಿಕೊಂಡು ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ಕೆಲಸವನ್ನು ಬಿಜೆಪಿ ಪಕ್ಷದಿಂದ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಬಿ.ವೈ ವಿಜಯೇಂದ್ರ ಸ್ಪರ್ಧೆ ಖಚಿತ.
ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ ಆದರೆ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ಈಗಲೇ ಹೇಳಲು ಸಾದ್ಯವಿಲ್ಲ ಎಂದರು
ಇನ್ನು ಬಿವೈ ವಿಜಯೇಂದ್ರ ರವರು ಗುಬ್ಬಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು ಇನ್ನು ಗುಬ್ಬಿ ಇಂದ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಆ ಬಗ್ಗೆ ಸ್ಪರ್ಧೆ ಮಾಡುವ ಬಗ್ಗೆ ತೀರ್ಮಾನ ಆಗಿಲ್ಲ ಎಂದಿದ್ದಾರೆ.
ನೂತನ ಲೋಕಾಯುಕ್ತರ ನೇಮಕ ಆಗಿದ್ದು ಆ ಸಂಬಂಧ ಮಾಹಿತಿ ನೀಡಿರುವ ಅವರು ನೂತನ ಲೋಕಾಯುಕ್ತರು ಉತ್ತಮವಾಗಿ ಕೆಲಸ ನಿರ್ವಹಿಸಲಿದ್ದಾರೆ ಎಂದಿದ್ದಾರೆ.
ವರದಿ_ಮಾರುತಿ ಪ್ರಸಾದ್ ತುಮಕೂರು