ಬಿಟ್-ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ಆಗಲಿದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ.
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕದಲ್ಲಿ ಪ್ರಸ್ತುತ ಬಿಟ್ಕಾಯ್ನ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಆಡಳಿತ ಪಕ್ಷಗಳು ಹಾಗೂ ವಿರೋಧ ಪಕ್ಷಗಳ ನಡುವೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ಆಗಲಿದೆ ಎಂದರು.
ಇನ್ನು ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಪಾಲ್ಗೊಂಡಿದ್ದರು ಅವರಿಗೆ ಕಠಿಣ ಕ್ರಮ ಆಗಲಿದೆ ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಹ ತನಿಖೆಗೆ ಆದೇಶಿಸಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ ಈ ಮೂಲಕ ಬಿಟ್-ಕಾಯಿನ್ ಹಗರಣದಲ್ಲಿ ಪಾಲ್ಗೊಂಡಿರುವ ಅವರ ಮೇಲೆ ಕಠಿಣ ಕ್ರಮ ಕಾನೂನು ಕ್ರಮ ಜಾರಿಯಾಗಲಿದೆ ಎಂದು ತುಮಕೂರಿನಲ್ಲಿ ಸ್ಪಷ್ಟಪಡಿಸಿದರು.
ಇನ್ನು ಈ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ರವರ ಗಮನಕ್ಕೂ ಸಹ ಬಂದಿರುವುದರಿಂದ ಈ ಬಗ್ಗೆ ಯಾವುದೇ ಮುಲಾಜಿಲ್ಲದೆ ಸಮಗ್ರ ತನಿಖೆ ಆಗಲಿದೆ ಎಂದರು.
ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸಕ್ಕೆ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪನವರು ಇನ್ನು ಅವರು ದೆಹಲಿ ಪ್ರವಾಸ ಇನ್ನು ಖಾಸಗಿ ಪ್ರವಾಸವಾಗಿದೆ ನಾನು ಕೂಡ ಅವರ ಬಳಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ ಎಂದು ತಿಳಿಸಿದರು.