ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸಲು ನಾಲ್ವರ ಹೆಸರು ಶಿಫಾರಸು ಮಾಡಿದ ಸುಪ್ರೀಂ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸಲು ನಾಲ್ವರ ಹೆಸರು ಶಿಫಾರಸು ಮಾಡಿದ ಸುಪ್ರೀಂ

 

ಬೆಂಗಳೂರು: ಕರ್ನಾಟಕ ಹೈಕೋರ್ಟ್‍ನಲ್ಲಿ ಖಾಲಿ ಇರುವ ನ್ಯಾಯಾಮೂರ್ತಿಗಳ ಹುದ್ದೆಗಳಿಗೆ ನಾಲ್ವರು ವಕೀಲರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿ ಸುಪ್ರೀಂಕೋರ್ಟ್ ಕೊಲಿಜಿಯಂ ಪತ್ರ ಬರೆದಿದೆ. ಅ.6ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

 

ಅನಂತ ರಾಮನಾಥ್ ಹೆಗ್ಡೆ, ಸಿದ್ಧಯ್ಯ ರಾಚಯ್ಯ, ಚಪ್ಪುದೀರ್ ಮೊಣ್ಣಪ್ಪ ಪೂಣಚ್ಚ ಹಾಗೂ ಕನ್ನಂಕುಜಿಲ್ ಶ್ರೀಧರನ್ ಹೇಮಲೇಖಾ ಅವರ ಹೆಸರನ್ನ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.

 

ಅ.6ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅ.1, 2021ರ ಹೊತ್ತಿಗೆ ಕರ್ನಾಟಕ ಹೈಕೋರ್ಟ್ 45 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆದರೆ, ಇದರ ಒಟ್ಟು ಬಲ 62 ಇರಬೇಕು.

Leave a Reply

Your email address will not be published. Required fields are marked *

You cannot copy content of this page

error: Content is protected !!