ಸಂಬಳ ನೀಡದೆ ಕಾರ್ಮಿಕರಿಗೆ ವಂಚಿಸಿದ ಗಾರ್ಮೆಂಟ್ಸ್……?
ತುಮಕೂರು_ಗಾರ್ಮೆಂಟ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರಿಗೆ ಸಂಬಳ ನೀಡಿದೆ ವಂಚಿಸಿ ಕಾರ್ಮಿಕರನ್ನು ಬೀದಿಗೆ ತಳ್ಳಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತುಮಕೂರು ನಗರದ ರಿಂಗ್ ರಸ್ತೆಯಲ್ಲಿ ಇರುವ ಎ.ಪಿ ಕ್ರಿಯೇಶನ್ಸ್ ಎಂಬ ಹೆಸರಿನ ಗಾರ್ಮೆಂಟ್ಸ್ ನಲ್ಲಿ ತುಮಕೂರು ನಗರದ ಹಲವು ಮಹಿಳೆಯರು ಗಾರ್ಮೆಂಟ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ನಾಲ್ಕು ತಿಂಗಳ ಹಿಂದೆ ಆರಂಭಗೊಂಡಿದ ಗಾರ್ಮೆಂಟ್ಸ್ ನಲ್ಲಿ 150ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದು ಕಳೆದ ಕೆಲ ತಿಂಗಳುಗಳಿಂದ ಸಂಬಳ ನೀಡದೆ ಕಾರ್ಮಿಕರಿಗೆ ವಂಚಿಸಿದ ಆರೋಪ ಕೇಳಿ ಬಂದಿದ್ದು ಇಂದು ಪ್ರಕರಣ ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಮೆಟ್ಟಿಲು ಏರಿದೆ.
ಇಂದು ಬೆಳಗ್ಗೆ ಕಾರ್ಖಾನೆಗೆ ಕೆಲಸ ನಿರ್ವಹಿಸಲು ತೆರಳಿದ ಮಹಿಳೆಯರು ಕಾರ್ಖಾನೆ ಬಾಗಿಲು ಹಾಕಿದ್ದನ್ನ ಮನಗಂಡು ಮಾಲೀಕರಿಗೆ ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದರು ಮಾಲೀಕರು ಹಾಗೂ ಉನ್ನತ ಸಿಬ್ಬಂದಿಗಳಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದೆ ಇಂದು ಪೊಲೀಸರ ಮೊರೆ ಹೋಗಿದ್ದಾರೆ.
ಇನ್ನು ಘಟನೆ ಬೆಳಕಿಗೆ ಬಂದ ಕೂಡಲೇ ಸ್ಥಳಕ್ಕೆ ಪಾಲಿಕೆ ಸದಸ್ಯ ನಯಾಜ್ ಅಹಮದ್ , ಸ್ಥಳೀಯ ಮುಖಂಡರು ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ ನೊಂದ ಕಾರ್ಮಿಕರಿಗೆ ಸಾಂತ್ವನ ಹೇಳಿದ್ದಾರೆ.
ಇನ್ನು ಸುಮಾರು ನೂರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಹಲವು ತಿಂಗಳಿಂದ ಸಂಬಳ ನೀಡದೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು ಇನ್ನಾದರೂ ಸಂಬಂಧಪಟ್ಟ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳುವರೇ ಕಾದು ನೋಡಬೇಕಿದೆ.