ಶಾಲಾ ಪ್ರಾರಂಭೋತ್ಸವ ದಿನದಂದು ಹೂ ಚೆಲ್ಲಿ ಮಕ್ಕಳನ್ನು ಸ್ವಾಗತಿಸಿದ ಗೌತಮ್ ಶಾಲೆ ಶಿಕ್ಷಕರು

ಶಾಲಾ ಪ್ರಾರಂಭೋತ್ಸವ ದಿನದಂದು ಹೂ ಚೆಲ್ಲಿ ಮಕ್ಕಳನ್ನು ಸ್ವಾಗತಿಸಿದ ಗೌತಮ್ ಶಾಲೆ ಶಿಕ್ಷಕರು

ಹನೂರು :- ಪಟ್ಟಣದ ಒಡೆಯರ ಪಾಳ್ಯ ಮುಖ್ಯರಸ್ತೆಯಲ್ಲಿರುವ ಗೌತಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಹೂ ಚೆಲ್ಲಿ ಸಿಹಿ ಹಂಚಿ ಬರಮಾಡಿ ಕೊಂಡಿದ್ದಾರೆ. ರಾಜ್ಯ ಹಾಗೂ ಜಿಲ್ಲೆಯಾದ್ಯಂತ.ಸೋಮವಾರ ಶಾಲೆಗಳು ಪುನರಾರಂಭಗೊಂಡಿವೆ.

 

 

 

 

 

 

 

 

 

 

ಶಾಲೆ ಆರಂಭೋತ್ಸವ ನಿಮಿತ್ತ ತಾಲೂಕಿನ ವಿವಿಧ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿದ್ದು, ಗೌತಮ್ ಪ್ರೌಢಶಾಲೆಯಲ್ಲಿ ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳ ಮೇಲೆ ಹೂಮಳೆ ಗೈದು ಶಾಲೆಯ ಶಿಕ್ಷಕರು, ಸಿಬ್ಬಂದಿ ಸ್ವಾಗತಿಸಿದರು.ಶಾಲಾ ಆವರಣದಲ್ಲಿ ಬುದ್ಧ.ಬಸವಣ್ಣ .ಬಾಬಾಸಾಹೇಬ್ ಅಂಬೇಡ್ಕರ್ ರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಾಡಗೀತೆ ಹಾಡಿದರು.

 

 

 

 

 

 

 

 

 

ಮಕ್ಕಳಿಗೆ ಗುಲಾಬಿ ಹೂ, ಸಿಹಿ ನೀಡಿ ಶಾಲೆ ಆವರಣದಲ್ಲಿ ಗಿಡಗಳಿಗೆ ನೀರೆರೆದು ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಗೌತಮ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು ರವೀಂದ್ರ. ಹಾಗೂ ಶಿಕ್ಷಕರು ಶಿಕ್ಷಕಿಯರು ಉಪಸ್ಥಿತರಿದ್ದರು

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!