ಉಳುವವರಿಗೆ ಜಮೀನು ಬಿಟ್ಟುಕೊಡಲು ಮಹತ್ವದ ನಿರ್ಧಾರ: ಡೀಮ್ಡ್ ಅರಣ್ಯದಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ
ಬೆಂಗಳೂರು: ಡೀಮ್ಡ್ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮತ್ತು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ.
ರಾಜ್ಯದ 9 ಲಕ್ಷ ಹೆಕ್ಟೇರ್ ಅರಣ್ಯದಲ್ಲಿ 6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಬಿಟ್ಟುಕೊಡಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ.
ಈಗಾಗಲೇ ಡೀಮ್ಡ್ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡಿರುವವರು ಮತ್ತು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಭೂಮಿ ಹಂಚಿಕೆ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆ ವಶಕ್ಕೆ ಪಡೆಯುವ ಕುರಿತು ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಡೀಮ್ಡ್ ಅರಣ್ಯದಿಂದ ಕಂದಾಯ ಇಲಾಖೆಗೆ ಭೂಮಿ ಬಿಡಿಸಿಕೊಳ್ಳಲಾಗುವುದು. ಇಂತಹ ಭೂಮಿಯಲ್ಲಿ ಸಾಗುವಳಿ, ಉಳುಮೆ ಮಾಡಿಕೊಂಡಿರುವ ಮತ್ತು ಮನೆ ಕಟ್ಟಿಕೊಂಡವರಿಗೆ ಹಂಚಿಕೆ ಮಾಡಲಾಗುವುದು. ಇದರಿಂದ ಒಕ್ಕಲೆಬ್ಬಿಸುವ ಆತಂಕದಲ್ಲಿದ್ದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.