ತುಮಕೂರು ನಗರಸಭೆಯ ಮಾಜಿ ಉಪಾಧ್ಯಕ್ಷ ರಿಂದ , ಸಾಮಾಜಿಕ ಹೋರಾಟಗಾರನ ಮೇಲೆ ಹಲ್ಲೆ ದೂರು ಸಲ್ಲಿಕೆ.
ತುಮಕೂರು -ತುಮಕೂರಿನ ಖಾಸಗಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಮುಖಂಡ ಹಾಗೂ ಆತನ ಹಿಂಬಾಲಕರು ಸಾಮಾಜಿಕ ಹೋರಾಟಗಾರರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ತುಮಕೂರಿನ ಹಜರತ್ ಮದರಿಶ ಕಟ್ಟಡದಲ್ಲಿ ನಡೆಯುತ್ತಿದ್ದ ಖಾಸಗಿ ಕಾರ್ಯಕ್ರಮದ ವೇಳೆ ನಗರಸಭೆಯ ಮಾಜಿ ಉಪಾಧ್ಯಕ್ಷ ಅಸ್ಲಾಂ ಪಾಷಾ ಆತನ ಮಗ ಹುಸೇನ್ ಹಾಗೂ ಎಂಇಪಿ ಪಕ್ಷದ ಮುಖಂಡ ನಿಸಾರ್ (ಆರಿಫ್) ಸೇರಿದಂತೆ ಹಲವರು ಸಾಮಾಜಿಕ ಹೋರಾಟಗಾರ ಹಾಗೂ ಕಳೆದ ಬಾರಿಯ ಎಂಪಿ ಚುನಾವಣೆಯ ಪರಾಜಿತ ಅಭ್ಯರ್ಥಿ ಜೆ ಕೆ ಸಮಿ ಅವರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಸಾಮಾಜಿಕ ಹೋರಾಟಗಾರ ಜೆ.ಕೆ ಸಮಿ ಮಾತನಾಡಿ ತುಮಕೂರು ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟಗಾರರಿಗೆ ಭದ್ರತೆ ಇಲ್ಲ ಎಂಬುದಕ್ಕೆ ನನ್ನ ಮೇಲೆ ನಡೆದಿರುವ ಹಲ್ಲೇ ಸಾಕ್ಷಿ ಇನ್ನೂ ಘಟನೆಯ ಸಂಭಂದಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಕೂಡಲೇ ಹಲ್ಲೆ ಮಾಡಿರುವವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿರುವ ಅವರು ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು ಅವರದೇ ಪಕ್ಷದ ಮುಖಂಡರು ಹೀಗೆ ಸಾರ್ವಜನಿಕವಾಗಿ ಹಲ್ಲೆ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ, ಇಂತಹ ಹಲ್ಲೆಕೋರರ ಪಕ್ಷದಲ್ಲಿ ಇಟ್ಟುಕೊಂಡಿರುವ ಮುಖಂಡರು ಇದಕ್ಕೆ ಉತ್ತರಿಸಬೇಕು ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟಗಾರರಿಗೆ ಭದ್ರತೆ ಅವಶ್ಯಕತೆಇದೆ ಆ ನಿಟ್ಟಿನಲ್ಲಿ ನನ್ನ ಕಾನೂನು ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಅದೇನೇ ಇರಲಿ ಸಾರ್ವಜನಿಕವಾಗಿ ಹಲ್ಲೆ ಮಾಡಿರುವ ನಗರಸಭಾ ಮಾಜಿ ಸದಸ್ಯರ ಮೇಲೆ ಯಾವ ರೀತಿ ಕಾನೂನು ಕ್ರಮ ಆಗಲಿದೆ ಎಂಬುದನ್ನು ಕಾದುನೋಡಬೇಕಿದೆ.