ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ PDO ಮತ್ತು ಅಧ್ಯಕ್ಷೆಯನ್ನ ವಜಾ ಮಾಡುವಂತೆ ಒತ್ತಾಯಿಸಿದ ಗ್ರಾಮ ಪಂಚಾಯಿತಿ ಸದಸ್ಯರು

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ PDO ಮತ್ತು ಅಧ್ಯಕ್ಷೆಯನ್ನ ವಜಾ ಮಾಡುವಂತೆ ಒತ್ತಾಯಿಸಿದ ಗ್ರಾಮ ಪಂಚಾಯಿತಿ ಸದಸ್ಯರು.

 

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ಕಂಭದಲ್ಲಿ ದಿನಾಂಕ 13/08/2022 ರ ರಾತ್ರಿ 2 ಗಂಟೆಯವರೆಗೂ ರಾಷ್ಟ್ರಧ್ವಜವನ್ನು ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿತ್ತು…

 

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜು ಮಲ್ಲೇಕಾವು ಮಾತನಾಡಿ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ದ್ವಜಸ್ತಂಭದಲ್ಲಿ ದಿನಾಂಕ 13/08/2022 ರ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ.ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿನೋದ ನವೀನ್ ಕುಮಾರ್ ರವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ತಿಳಿಸಿದರು.

ರಾಷ್ಟ್ರಧ್ವಜದ ವಿಚಾರವಾಗಿ ಕೇಂದ್ರ ಸರ್ಕಾರದ ಆದೇಶವನ್ನ ಗಾಳಿಗೆ ತೂರಿದ ಘಟನೆಯು ನಮ್ಮ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವಾಗಿ ಸುದ್ದಿ ಹೊರಬಂದಿತ್ತು ಮತ್ತು ಸ್ಥಳೀಯರಿಂದ ನಮ್ಮಗಳ ಗಮನಕ್ಕೆ ಈ ವಿಚಾರ ಬಂದಿತ್ತು ನಾವು ತಕ್ಷಣವೇ ಪಿಡಿಓ ರವರ ಗಮನಕ್ಕೆ ವಿಷಯವನ್ನು ತಂದೆವು ಆದರೂ ಕೂಡ ಪಿಡಿಓ ಬೇಜವಾಬ್ದಾರಿ ಉತ್ತರವನ್ನು ನೀಡುತ್ತಾರೆ.ಆದ್ದರಿಂದ ದೇಶದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಪಿಡಿಓ,ಅಧ್ಯಕ್ಷರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಗ್ರಾಮ ಪಂಚಾಯಿತಿ ಸದಸ್ಯ ಅಂಜನಾದ್ರಿ ವೀರಭದ್ರಯ್ಯ.

ಇದೇ ಸಂದರ್ಭದಲ್ಲಿ ಮಲ್ಲೇಕಾವು ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯ ಗೋವಿಂದರಾಜು ಮಾತನಾಡಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ನಮ್ಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ ಸದರಿ ಘಟನೆಯ ವಿಚಾರವಾಗಿ ಕೆಲವು ದೃಶ್ಯ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿದೆ ಆದರೂ ಸಹ ಇಲ್ಲಿಯ ವರೆಗೂ ಕೂಡ ಪಿಡಿಒ ಮತ್ತು ಅಧ್ಯಕ್ಷೆಯ ಮೇಲೆ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿಯಿಂದ ಯಾವುದೇ ರೀತಿಯ ಕಾನೂನು ಕ್ರಮ ಆಗಿರುವುದಿಲ್ಲ ಆದ್ದರಿಂದ ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

 

 

ಒಕ್ಕೂಟ ಭಾರತ ಭಾರತ ಸರ್ಕಾರದ ಆದೇಶದಂತೆ ಸರ್ಕಾರಿ ಕಚೇರಿಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿದಿನವೂ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಜೆ ಸೂರ್ಯಸ್ತವಾಗುವ ಒಳಗೆ ತ್ರಿವರ್ಣ ಧ್ವಜವನ್ನು ಧ್ವಜಸ್ತಂಬದಿಂದ ಗೌರವ ಪೂರ್ವಕವಾಗಿ ಇಳಿಸಬೇಕೆಂಬ ಆದೇಶವನ್ನು ಪಾಲಿಸದೆ ಕಾನೂನು ಉಲ್ಲಂಘನೆ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯ ಕುಮಾರಿ ಮತ್ತು ಅಧ್ಯಕ್ಷೆ ವಿನೋದ ನವೀನ್ ಕುಮಾರ್ ರವರನ್ನು ಅಮಾನತ್ತು ಮಾಡಬೇಕು ಎಂದು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ಆರ್ ಶಂಕರ್ ಗೌಡ್ರು ಒತ್ತಾಯಿಸಿದ್ದಾರೆ.

 

 

ಕಳೆದ ನಾಲ್ಕು ದಿನಗಳಿಂದಲೂ ಕರ್ನಾಟಕ ರಣಧೀರರ ವೇದಿಕೆಯ ಕೊರಟಗೆರೆ ತಾಲ್ಲೂಕು ಘಟಕ ಕಾನೂನು ರೀತಿಯ ಹೋರಾಟ ಮಾಡುತ್ತಿದ್ದು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾದರು ಕೂಡ ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ ತಪ್ಪಿತಸ್ಥರ ಪರವಾಗಿ ನಿಂತಿದೆಯಾ ಎಂದು ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!