ಗಾಂಧೀಜಿ ಕಂಡ ಗ್ರಾಮ ಸ್ವರಾಜ್ ಪರಿಕಲ್ಪನೆ ಸಾಕಾರ ಮಾಡಲು ಪಿಡಿಓ, ಅಧ್ಯಕ್ಷರುಗಳ ಪಾತ್ರ ಬಹಳ ಮುಖ್ಯ: ಸಚಿವ ಜೆ.ಸಿ.ಮಾಧುಸ್ವಾಮಿ 

ಗಾಂಧೀಜಿ ಕಂಡ ಗ್ರಾಮ ಸ್ವರಾಜ್ ಪರಿಕಲ್ಪನೆ ಸಾಕಾರ ಮಾಡಲು ಪಿಡಿಓ, ಅಧ್ಯಕ್ಷರುಗಳ ಪಾತ್ರ ಬಹಳ ಮುಖ್ಯ: ಸಚಿವ ಜೆ.ಸಿ.ಮಾಧುಸ್ವಾಮಿ 

 

ತುಮಕೂರು :- ಗ್ರಾಮಗಳ ಅಭಿವೃದ್ಧಿಗಾಗಿ ಮಹಾತ್ಮ ಗಾಂಧೀಜಿಯವರ “ಗ್ರಾಮ ಸ್ವರಾಜ್ಯ ಪರಿಕಲ್ಪನೆ”ಯನ್ನು ಸಾಕಾರಗೊಳಿಸುವಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರುಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಭಿಪ್ರಾಯಪಟ್ಟರು.

 

ನಗರದ ಎಸ್.ಐ.ಟಿ. ಕಾಲೇಜಿನ ಬಿರ್ಲಾ ಆಡಿಟೋರಿಯಂನಲ್ಲಿoದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮೈಸೂರಿನ ಅಬ್ದುಲ್ ನಜೀರ್‌ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗ್ರಾಮೀಣ ಭಾಗದ ಜನರು ಸ್ಥಳೀಯ ಸಂಪನ್ಮೂಲವನ್ನು ಬಳಸಿಕೊಂಡು ನೆಮ್ಮದಿಯ ಜೀವನ ನಡೆಸಲು ಗ್ರಾಮಗಳಿಗೆ ಒಡೆತನ ನೀಡುವ ಸಲುವಾಗಿ ಗಾಂಧೀಜಿಯವರು ಗ್ರಾಮ ಸ್ವರಾಜ್ ಕಲ್ಪನೆಯ ಕನಸು ಕಂಡಿದ್ದರು. ಇದನ್ನು ಸಾಕಾರಗೊಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಅವರು ತಿಳಿಸಿದರು.

ನಜೀರ್‌ಸಾಬ್ ಅವರ ನಾಯಕತ್ವದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ಗಟ್ಟಿಯಾದ ನಿಲುವು ದೊರೆತಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿಗಳನ್ನು ಬಲಪಡಿಸಿದಂತಾಗಿದೆ. ಗ್ರಾಮ ಪಂಚಾಯತಿಗಳು ಸ್ಥಳೀಯ ಮಟ್ಟದಲ್ಲಿ ಆಯ್ಕೆಗೊಂಡ ಸದಸ್ಯರುಗಳು ಜನರ ಆಸೆ, ಅಭಿಲಾಷೆಗಳನ್ನು ಪೂರೈಸಿ ಶಾಂತಿಯಿAದ ಬದುಕು ಕಟ್ಟಿಕೊಳ್ಳುವ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಅಭಿವೃದ್ಧಿ ಪಡಿಸಬೇಕು ಎಂದರು.

ಪoಚಾಯತ್ ರಾಜ್ ವ್ಯವಸ್ಥೆಯಲ್ಲಿ ಗ್ರಾಮ ಸಭೆಗಳು ಬಹು ಮುಖ್ಯವಾಗಿದ್ದು, ರಾಷ್ಟçದ ಬುನಾದಿಯಾಗಿವೆ. ಶೇ.೮೦ರಷ್ಟು ಜನರು ಸೇರುವ ಮೂಲಕ ಗ್ರಾಮ ಸಭೆಗಳನ್ನು ನಿಷ್ಪಕ್ಷವಾಗಿ ನಡೆಸುವುದರೊಂದಿಗೆ ಜನರು ಬಯಸುವ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆ ಮೂಲಕ ಗ್ರಾಮ ಸ್ವರಾಜ್ಯದ ಕನಸು ನನಸುಗೊಳಿಸಬೇಕು ಎಂದು ಹೇಳಿದರು.

 

ಗ್ರಾಮಸಭೆಗಳು:-

ಗ್ರಾಮ ಪಂಚಾಯ್ತಿ ವ್ಯವಸ್ಥೆಗೆ ಗ್ರಾಮ ಸಭೆಗಳು ಅಡಿಪಾಯವಾಗಿದ್ದು, ಗ್ರಾಮ ಸಭೆಗಳನ್ನು ಯಶಸ್ವಿಗೊಳಿಸಬೇಕು. ಗ್ರಾಮ ಸಭೆಗಳಲ್ಲಿ ಆಯ್ಕೆಯಾಗುವ ಮನೆ ನಿರ್ಮಾಣ, ನಿವೇಶನ ಹಂಚಿಕೆ ಸೇರಿದಂತೆ ಇತರೆ ಯೋಜನೆಗಳ ಅನುಷ್ಠಾನದ ಅಧಿಕಾರವನ್ನು ಸ್ಥಳೀಯ ಮಟ್ಟಕ್ಕೆ ನೀಡಲಾಗಿದ್ದು, ಗ್ರಾಮ ಸಭೆಗಳ ಕುರಿತು ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಗ್ರಾಮ ಪಂಚಾಯ್ತಿಯ ಜನ ಪ್ರತಿನಿಧಿಗಳು ಉದಾಸೀನ ತೋರದೆ ಗ್ರಾಮಸಭೆಗಳನ್ನು ನಡೆಸಬೇಕು. ತಮ್ಮ ಆಡಳಿತದ ಅಧಿಕಾರವನ್ನು ಸದ್ಬಳಕೆ ಮಾಡಿಕೊಂಡು ಜನರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.

ನಿವೇಶನ ಕಲ್ಪಿಸಲು ಆದ್ಯತೆ:-

ಗ್ರಾಮ ಸ್ವರಾಜ್ ಯೋಜನೆಯಡಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಮುಖ್ಯವಾಗಿ ಮನೆ ಇಲ್ಲದವರಿಗೆ ನಿವೇಶನ ಕಲ್ಪಿಸಲು ಆದ್ಯತೆ ಕೊಡಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತಂದು ಜಾಗ ಗುರುತಿಸಿ ನಿವೇಶನ ಒದಗಿಸಿ ಮನೆ ನಿರ್ಮಾಣ ಮಾಡಿಕೊಡಬೇಕು ಎಂದರು.

ಜಲ ಜೀವನ್ ಮಿಷನ್:-

ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜಯಡಿ ೧೧ ಸಾವಿರ ಕೋಟಿ ರೂ. ಮೀಸಲಿರಿಸಲಾಗಿದ್ದು, ಗ್ರಾಮಗಳ ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಿ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದ್ದು, ಜಲ ಜೀವನ್ ಮಿಷನ್ ಯೋಜನೆಗೆ ಹೆಚ್ಚಿನ ಒತ್ತು ಕೊಡಬೇಕು. ಈ ಯೋಜನೆಯಡಿ ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಆದ್ಯತೆ ಕೊಡಬೇಕು ಎಂದು ತಿಳಿಸಿದು.

ಸ್ವಚ್ಛ ಭಾರತ್ ಮಿಷನ್:-

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯ್ತಿಗಳ ಮಟ್ಟದಲ್ಲಿ ಆಧುನಿಕ ಸಲಕರಣೆಗಳನ್ನು ಬಳಸಿಕೊಂಡು ಸೂಕ್ತ ರೀತಿಯಲ್ಲಿ ಕಸ ವಿಲೇವಾರಿ ಮಾಡಬೇಕು. ಅಭಿವೃದ್ಧಿ ಕಾಮಗಾರಿಗಳಂತೆಯೇ ಸ್ವಚ್ಛತೆಗೂ ಹೆಚ್ಚು ಒತ್ತು ಕೊಡಬೇಕು. ಗೌರವಯುತವಾಗಿ ಅಂತ್ಯ ಸಂಸ್ಕಾರ ನಡೆಸಲು ಪ್ರತಿ ಹಳ್ಳಿಯಲ್ಲಿಯೂ ಗ್ರಾಮ ಸಭೆಗಳಲ್ಲಿ ಚರ್ಚಿಸಿ ಜಾಗ ಗುರುತಿಸಿ ಸ್ಮಶಾನಗಳನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದರು.

ನರೇಗಾ ಯೋಜನೆಗೆ ಆದ್ಯತೆ:-

ಗ್ರಾಮೀಣ ಜನರ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಜಾರಿಗೆ ತರಲಾಗಿರುವ ನರೇಗಾ ಯೋಜನೆ ಅನುಷ್ಟಾನಕ್ಕೆ ಎಲ್ಲರೂ ಕೈಜೋಡಿಸಬೇಕು. ಹೆಚ್ಚು ಹೆಚ್ಚು ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಹಮ್ಮಿಕೊಳ್ಳುವ ಮೂಲಕ ಬಡ ಜನರಿಗೆ ಕೂಲಿ ಒದಗಿಸಬೇಕು. ಈಗಾಗಲೇ ನಿರ್ಮಾಣವಾಗಿರುವ ಕೃಷಿ ಹೊಂಡ, ಕೊಟ್ಟಿಗೆಗಳಿಗೆ ನರೇಗಾ ಯೋಜನೆಯಡಿ ಅಕ್ರಮವಾಗಿ ಹಣ ಸಂದಾಯವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಎಲ್ಲಿಯೂ ನರೇಗಾ ಹಣ ದುರ್ಬಳಕೆಯಾಗದಂತೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಬೇಕು ಎಂದು ಸಲಹೆ ನೀಡಿದರು.

ದೂರದೃಷ್ಠಿ ಯೋಜನೆ:-

ಗ್ರಾಮ ಪಂಚಾಯ್ತಿಗಳಿಗೆ ಹೆಚ್ಚಿನ ಅಧಿಕಾರ ಒದಗಿಸುವ ನಿಟ್ಟಿನಲ್ಲಿ ಈ ಬಾರಿ ಆಯ-ವ್ಯಯದಲ್ಲಿ ದೂರದೃಷ್ಠಿ ಯೋಜನೆ ರೂಪಿಸಲಾಗಿದೆ. ಈ ಯೋಜನೆಯು ೫ ವರ್ಷಗಳ ಅಭಿವೃದ್ಧಿ ಕಾಮಗಾರಿಗಳ ಒಳನೋಟವನ್ನೊಳಗೊಂಡಿದ್ದು, ಯೋಜನೆಯಡಿ ಕಾಮಗಾರಿಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಟಾನಗೊಳಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಸಹಾಯಕ ನಿರ್ದೇಶಕ ಜಗದೀಶ್ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಅವರು ಕೋವಿಡ್ ೩ನೇ ಅಲೆಯ ಕುರಿತು ಮುನ್ನೆಚ್ಚರಿಕೆ ಮತ್ತು ನಿರ್ವಹಣೆ, ಅಔಖಆಇಂ ಸಂಸ್ಥೆ ಕಾರ್ಯದರ್ಶಿ ಡಾ: ಸುದರ್ಶನ ಅವರು ಜೀವವೈವಿಧ್ಯತೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಪರಮೇಶ್ವರ್ ಹೆಗಡೆ ಅವರು ಜಲಜೀವನ್ ಮಿಷನ್ ಯೋಜನೆ ಕುರಿತು ಉಪನ್ಯಾಸ ನೀಡಿದರು.

One thought on “ಗಾಂಧೀಜಿ ಕಂಡ ಗ್ರಾಮ ಸ್ವರಾಜ್ ಪರಿಕಲ್ಪನೆ ಸಾಕಾರ ಮಾಡಲು ಪಿಡಿಓ, ಅಧ್ಯಕ್ಷರುಗಳ ಪಾತ್ರ ಬಹಳ ಮುಖ್ಯ: ಸಚಿವ ಜೆ.ಸಿ.ಮಾಧುಸ್ವಾಮಿ 

  1. Good day,

    My name is Eric and unlike a lot of emails you might get, I wanted to instead provide you with a word of encouragement – Congratulations

    What for?

    Part of my job is to check out websites and the work you’ve done with vijayabharatha.in definitely stands out.

    It’s clear you took building a website seriously and made a real investment of time and resources into making it top quality.

    There is, however, a catch… more accurately, a question…

    So when someone like me happens to find your site – maybe at the top of the search results (nice job BTW) or just through a random link, how do you know?

    More importantly, how do you make a connection with that person?

    Studies show that 7 out of 10 visitors don’t stick around – they’re there one second and then gone with the wind.

    Here’s a way to create INSTANT engagement that you may not have known about…

    Talk With Web Visitor is a software widget that’s works on your site, ready to capture any visitor’s Name, Email address and Phone Number. It lets you know INSTANTLY that they’re interested – so that you can talk to that lead while they’re literally checking out vijayabharatha.in.

    CLICK HERE http://talkwithcustomer.com to try out a Live Demo with Talk With Web Visitor now to see exactly how it works.

    It could be a game-changer for your business – and it gets even better… once you’ve captured their phone number, with our new SMS Text With Lead feature, you can automatically start a text (SMS) conversation – immediately (and there’s literally a 100X difference between contacting someone within 5 minutes versus 30 minutes.)

    Plus then, even if you don’t close a deal right away, you can connect later on with text messages for new offers, content links, even just follow up notes to build a relationship.

    Everything I’ve just described is simple, easy, and effective.

    CLICK HERE http://talkwithcustomer.com to discover what Talk With Web Visitor can do for your business.

    You could be converting up to 100X more leads today!

    Eric
    PS: Talk With Web Visitor offers a FREE 14 days trial – and it even includes International Long Distance Calling.
    You have customers waiting to talk with you right now… don’t keep them waiting.
    CLICK HERE http://talkwithcustomer.com to try Talk With Web Visitor now.

    If you’d like to unsubscribe click here http://talkwithcustomer.com/unsubscribe.aspx?d=vijayabharatha.in

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version