ತುಮಕೂರಿನ ದೇವಸ್ಥಾನದಲ್ಲಿ ಮೊಳಗಿದ ಹನುಮಾನ್ ಚಾಲೀಸಾ.

ತುಮಕೂರಿನ ದೇವಸ್ಥಾನದಲ್ಲಿ ಮೊಳಗಿದ ಹನುಮಾನ್ ಚಾಲೀಸಾ.

 

ತುಮಕೂರು_ರಾಜ್ಯಾದ್ಯಂತ ಹಲವು ದಿನಗಳಿಂದ ಆಜಾನ್ ನಿಂದ ಆಗುತ್ತಿರುವ ತೊಂದರೆಗಳ ವಿರುದ್ಧ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಹಲವು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು .

 

 

ಇದಕ್ಕೆ ಸಂಬಂಧಿಸಿದಂತೆ ಮಸೀದಿಗಳಲ್ಲಿ ಆಜಾನ್ ಕೂಗುವುದರಿಂದ ಸಾಕಷ್ಟು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಕಳೆದ ಎರಡು ಮೂರು ತಿಂಗಳಿನಿಂದ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಒತ್ತಾಯಿಸಿದ್ದವು.

 

 

ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ಇಂದಿನಿಂದ ಹಿಂದೂ ದೇವಸ್ಥಾನಗಳಲ್ಲಿ ಆಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಪಠಣ ಹಾಗೂ ಭಜನೆಗಳನ್ನು ಮಾಡುವ ಮೂಲಕ ಆಜಾನ್ ವಿರುದ್ಧ ಸೆಡ್ಡು ಹೊಡೆಯಲು ಮುಂದಾಗಿವೆ.

 

 

ಇದಕ್ಕೆ ಸಂಬಂಧಿಸಿದಂತೆ ಇಂದು ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ಕೋಟೆ ಆಂಜನೇಯ ದೇವಾಲಯದಲ್ಲಿ ಶ್ರೀರಾಮಸೇನೆ, ರಾಷ್ಟ್ರೀಯ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಅಜಾನ್ ವಿರುದ್ಧ ಹನುಮಾನ್ ಚಾಲೀಸಾ ಪಠಣ ಮಾಡುವ ಮೂಲಕ ಧ್ವನಿವರ್ಧಕಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು ಸರ್ಕಾರವನ್ನು ಒತ್ತಾಯ ಮಾಡಲು ಮುಂದಾಗಿದ್ದಾರೆ.

 

 

 

ಈ ಬಗ್ಗೆ ಮಾಹಿತಿ ನೀಡಿರುವ ಪಾವಗಡ ತಾಲೂಕು ಶ್ರೀರಾಮಸೇನೆಯ ಅಧ್ಯಕ್ಷರಾದ ರಾಮಾಂಜಿನಿ ರವರು ಮಾತನಾಡಿ ಇಂದು ಮುಂಜಾನೆ 04:50 ರಿಂದಲೇ ಹನುಮಂತನ ಭಜನೆ ಮಾಡುವ ಮೂಲಕ ಮಸೀದಿ ಮೇಲಿನ ದ್ವನಿ ವರ್ದಕಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಶ್ರೀರಾಮಸೇನೆಯ ಸೇರಿದಂತೆ ಹಲವು ಹಿಂದೂ ಪರ ಸಂಘಟನೆಗಳು ಒತ್ತಾಯ ಮಾಡಿದ್ದು ಇದುವರೆಗೂ ಕ್ರಮಕೈಗೊಳ್ಳದ ಸಂಬಂಧ ಇಂದಿನಿಂದ ಪ್ರತಿದಿನ ನಿರಂತರವಾಗಿ ಶ್ರೀರಾಮ ಸೇನೆ ವತಿಯಿಂದ ದೇವಾಲಯದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುವ ಮೂಲಕ ಮಸೀದಿಗಳ ಧ್ವನಿವರ್ಧಕದ ವತಿಯಿಂದ ಆಗುತ್ತಿರುವ ತೊಂದರೆಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಈ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದ ಅವರು.

 

 

ಇನ್ನು ಆಜಾನ್ ಮುಸ್ಲಿಂ ಸಮುದಾಯದ ಅವಿಭಾಜ್ಯ ಅಂಗ ಅದಕ್ಕೆ ನಮ್ಮ ವಿರೋಧವಿಲ್ಲ ಆದರೆ ಮಸೀದಿಗಳಲ್ಲಿ ರುವ ಧ್ವನಿವರ್ಧಕಗಳ ಮೂಲಕ ಹೆಚ್ಚಿನ ಶಬ್ದಮಾಲಿನ್ಯ ಉಂಟಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳು, ವಯೋವೃದ್ಧರಿಗೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಮಸೀದಿಗಳ ಮುಖ್ಯಸ್ಥರಿಗೆ ಹಲವು ಬಾರಿ ಮನವಿ ಮಾಡಿದರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹಿಂದಿನಿಂದ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಪಠಣ ಹಾಗೂ ಭಜನೆ ಮಾಡುವ ಮೂಲಕ ಸರ್ಕಾರ ಕ್ರಮ ಕೈಗೊಳ್ಳುವ ವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಶ್ರೀರಾಮಸೇನೆಯ ತಾಲೂಕು ಅಧ್ಯಕ್ಷ ರಾಮಾಂಜಿನಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

 

 

ಇನ್ನು ಇದೇ ಸಂದರ್ಭದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಾದ ರಾಘವೇಂದ್ರ ಅಲ್ಕುಂದ ರಾಜ, ಶೇ, ಪ್ರವೀಣ್, ಅನಿಲ್ ,ಕುಮಾರ್ ರಾಕೇಶ್ ನರೇಶ್, ವಾಸು ಸೇರಿದಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಭಜನೆಯಲ್ಲಿ ಪಾಲ್ಗೊಂಡಿದ್ದರು.

 

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version