ತಾನು ಸಹ ಸಿಎಂ ಸ್ಥಾನದ ಆಕಾಂಕ್ಷಿ – ಮಾಜಿ ಮುಖ್ಯಮಂತ್ರಿ ಪರಮೇಶ್ವರ್

ತಾನು ಸಹ ಸಿಎಂ ಸ್ಥಾನದ ಆಕಾಂಕ್ಷಿ – ಡಾ. ಜಿ ಪರಮೇಶ್ವರ್

 

 

ಮಧುಗಿರಿ : ಈ ಬಾರಿ ಕಾಂಗ್ರೆಸ್ ಸರ್ಕಾರ ಶೇ. 100 ರಷ್ಟು ಅಧಿಕಾರ ಚುಕ್ಕಾಣಿ ಹಿಡಿಯಲಿದ್ದು, ಪಕ್ಷದಲ್ಲಿ 10 ಜನ ಸಿಎಂ ರೇಸ್ ನಲ್ಲಿದ್ದು, ಅದರಲ್ಲಿ ನಾನು ಸಹ ಒಬ್ಬ. ಆದರೆ ನಮ್ಮ ಗುರಿ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ನಂತರ ಸಿಎಂ ಯಾರಾಗಬೇಕು ಎಂಬುದನ್ನು ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

 

 

 

ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿ ಹನುಮಂತಪುರ ಗ್ರಾಮದಲ್ಲಿ ಬುಧವಾರ ಡಾ ಪರಮೇಶ್ವರ್ ರವರ 5 ವರ್ಷದ “ಸಾಧನೆಗಳ ಹೆಜ್ಜೆ ಗು ಪುಸ್ತಕವನ್ನು ಪ್ರತಿ ಮನೆಗೆ ತಲುಪಿಸುವ ಸಂದರ್ಭದಲ್ಲಿ ಮಾತನಾಡಿದ ಅವರು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ 2500 ಕೋಟಿ ರೂ ಅಭಿವೃದ್ಧಿ ಕೆಲಸ ಮಾಡಿದ್ದು, ಈ ಪೈಕಿ ಶಾಲೆ, ಅಂಗನವಾಡಿ, ಆಸ್ಪತ್ರೆ, ರಸ್ತೆ, ಸಿಸಿ ರಸ್ತೆ, ಚರಂಡಿ, ದೇಗುಲಗಳು ಒಳಗೊಂಡಿದ್ದು ಕ್ಷೇತ್ರದಲ್ಲಿ ಈವರೆಗೆ 20 ಸಾವಿರಕ್ಕೂ ಅಧಿಕ ಮನೆಗಳನ್ನು ಕಟ್ಟಲಾಗಿದೆ. ನಮ್ಮ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಬಡವರು ಕೃಷಿಕರು ಹಾಗೂ ಕೂಲಿ ಕಾರ್ಮಿಕರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ 7 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು 5 ಕೆಜಿಗೆ ಇಳಿಸಿ ಈ ಮೂಲಕ ಬಡವರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕಲು ಮುಂದಾಗಿದೆ. ಅದೇ ರೀತಿ ಗ್ಯಾಸ್ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ದೂರಿದ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆಪ್ರತೀ ಮನೆಯ ಕುಟುಂಬದ ಒಡತಿಗೆ ಪ್ರತಿ ತಿಂಗಳು ಅವರ ಖಾತೆಗೆ 2 ಸಾವಿರ ನೀಡಲಾಗುತ್ತದೆ. ರೈತರ ಬಡವರ ಅನುಕೂಲಕ್ಕಾಗಿ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು 10 ಕೆಜಿಗೆ ಏರಿಸುವುದಾಗಿ ಪ್ರಣಾಳಿಕೆಯ ಸಮಿತಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದರು.

 

 

 

 

ಪ್ರತೀ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ ಕಾರಣ ಈ ಸಲ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ಕೇಳುತ್ತಿದ್ದೇನೆ ಎಂದರು.

 

 

 

 

ಜೆಡಿಎಸ್ ಪಕ್ಷದವರು 123 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಮೊದಲು ಜೆಡಿಎಸ್ ನವರು ರಾಜ್ಯದ 224 ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿ ಆನಂತರ 123 ಸ್ಥಾನ ಗೆಲ್ಲಲಿ ಎಂದರು.

 

 

 

 

ಈ ಸಂದರ್ಭದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಪಿಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಬೈರಪ್ಪ, ಗ್ರಾ.ಪಂ ಅಧ್ಯಕ್ಷೆ ಗಂಗರತ್ನಮ್ಮ ಬೈರಪ್ಪ, ಮುಖಂಡರಾದ ಕೊಂಡವಾಡಿ ರಾಜಕುಮಾರ್, ಎಂ ಜಿ ಶ್ರೀನಿವಾಸ್ ಮೂರ್ತಿ, ಬಡಚೌಡನಹಳ್ಳಿ ಶಿವಕುಮಾರ್, ದೊಡ್ಡ ಹೊಸಹಳ್ಳಿ ಗ್ರಾ.ಪಂ ಸದಸ್ಯ ನರಸಿಂಹಮೂರ್ತಿ, ವಾಲೆ ಚಂದ್ರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ನಾರಾಯಣ ಅರಕೆರೆ ಶಂಕರ್ ಇತರರು ಇದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!