ಸದ್ಯ 1 ರಿಂದ 5ರವರೆಗೆ ಪ್ರಾಥಮಿಕ ಶಾಲೆಗಳ ಆರಂಭ ಇಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೇರಳದಲ್ಲಿ ಕೊರೊನಾ ಏರಿಕೆ ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಸಂಖ್ಯೆ ಹೆಚ್ಚಾಗಿದೆ.
ಹೀಗಾಗಿ ಸದ್ಯ 6 ರಿಂದ ಟ್ರಯಲ್ ಮಾಡುತ್ತಾ ಇದ್ದೀವಿ ಅಷ್ಟೇ. ಪ್ರಾಥಮಿಕ ಶಾಲೆಗಳಾದ 1 ರಿಂದ 5 ರವರೆಗೆ ತೆರೆಯಲು ಚಿಂತನೆ ಇಲ್ಲ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಪ್ರಾಥಮಿಕ ಶಾಲೆ ಆರಂಭಿಸದಿರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.
ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಅಲ್ಲದೆ ಈ ನಡುವೆ ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ
ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭ ಇಲ್ಲ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ತಿಳಿಸಿದ್ದಾರೆ.
ಈಗಾಗಲೇ ಆರಂಭವಾದ ಕಾಲೇಜುಗಳಲ್ಲಿ ಕೊರೊನಾ ಕೇಸ್‌ಗಳು ಪತ್ತೆಯಾಗಿವೆ.
ಹೀಗಾಗಿ ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭ ಬೇಡ ಎಂದು ನಿರ್ಧರಿಸಲಾಗಿದೆ.
ಆದರೆ ಶಿಕ್ಷಣ ಇಲಾಖೆಗೆ ಪ್ರಾಥಮಿಕ ಶಾಲೆ ಆರಂಭಿಸುವ ಆತುರ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಪ್ರಾಥಮಿಕ ಶಾಲೆ ಆರಂಭದ ಚಿಂತನೆಯೇ ಇಲ್ಲ.