ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಬೀದಿಬೀದಿಗಳಲ್ಲಿ ಕೂಗುತ್ತಿರುವ ಆರೋಗ್ಯ ಸಿಬ್ಬಂದಿಗಳು.

ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಬೀದಿಬೀದಿಗಳಲ್ಲಿ ಕೂಗುತ್ತಿರುವ ಆರೋಗ್ಯ ಸಿಬ್ಬಂದಿಗಳು.

 

ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಲು ಬೀದಿಯಲ್ಲಿ ತರಕಾರಿ ಮಾರುವಂತೆ ಕೂಗುತ್ತಿರುವ ಆರೋಗ್ಯ ಸಿಬ್ಬಂದಿಗಳ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಕಳೆದ ಎರಡು ವರ್ಷಗಳಿಂದ ದೇಶಾದ್ಯಂತ ಕರೋನಾ ಮೊದಲನೇ ಹಾಗೂ ಎರಡನೇ ಹಳೆಯ ಅಬ್ಬರ ಜೋರಾಗಿದ್ದು ಅದಕ್ಕೆ ಕಡಿವಾಣ ಹಾಕುವ ಸಲುವಾಗಿ ದೇಶಾದ್ಯಂತ ಕೇಂದ್ರ ರಾಜ್ಯ ಸರ್ಕಾರಗಳು ಸಾಕಷ್ಟು ಶ್ರಮವಹಿಸಿ ಕೋವಿಡ್ ಲಸಿಕೆಯನ್ನು ನೀಡಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರನ್ನು ಉತ್ತೇಜಿಸುವ ಸಲುವಾಗಿ ರಾಜ್ಯಗಳು ಒಂದಲ್ಲ ಒಂದು ವಿನೂತನ ಕಾರ್ಯಕ್ರಮದ ಮೂಲಕ ಲಸಿಕೆ ಹಾಕಿಸಿಕೊಳ್ಳಲು ಉತ್ತೇಜನ ನೀಡುತ್ತಿದ್ದಾರೆ.

 

ಇದಕ್ಕೆ ಪುಷ್ಟಿ ನೀಡುವಂತೆ ಆಂಧ್ರಪ್ರದೇಶದಲ್ಲಿ ಆರೋಗ್ಯ ಸಿಬ್ಬಂದಿಗಳು ಬೀದಿಯಲ್ಲಿ ತರಕಾರಿ ಮಾರುವಂತೆ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರ ಸೆಳೆಯಲು ಬೀದಿಯಲ್ಲಿ ಕೂಗುವ ಮೂಲಕ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

 

ಆರೋಗ್ಯ ಸಿಬ್ಬಂದಿಗಳ ಈ ವಿನೂತನ ಪ್ರಯತ್ನಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ .

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version