ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ….ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯಾದ್ಯಂತ ತೀವ್ರವಾದ ಚರ್ಚೆಗೆ ಗ್ರಾಸವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತಿದೆ.
ಇಂದು ರಾಜ್ಯಾದ್ಯಂತ ಹಲವು ಕಾಲೇಜುಗಳಲ್ಲಿ ಈ ವಿವಾದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬೆಳವಣಿಗೆಗಳು ನಡೆದು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದ್ದ ಪರಿಣಾಮ.
ಸೂಕ್ಷ್ಮತೆಯನ್ನು ಅರಿತ ಸರ್ಕಾರ ಮುಂದಿನ ಮೂರು ದಿನಗಳ ಅವಧಿಗೆ ರಾಜ್ಯಾದ್ಯಂತ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿದೆ .
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ ರವರು ಮುಂದಿನ ಮೂರು ದಿನಗಳವರೆಗೆ ರಾಜ್ಯಾದ್ಯಂತ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇನ್ನು ಹಿಜಾಬ್ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದ್ದು ಇಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ವಿಚಾರಣೆಯನ್ನು ನಾಳೆಗೆ ಮುಂದಿನ ಮುಂದೂಡಿದ್ದು ನಾಳೆ ಪುನಹ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ಅದೇನೇ ಇರಲಿ ರಾಜ್ಯಾದ್ಯಂತ ವಿದ್ಯಾಭ್ಯಾಸ ಮಾಡಬೇಕಾಗಿದ್ದ ವಿದ್ಯಾರ್ಥಿಗಳು ಸಂಘರ್ಷಕ್ಕೆ ತಿಳಿದಿದ್ದು ನಿಜಕ್ಕೂ ಶೋಚನೀಯ.
ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ ರಾಜ್ಯಾದ್ಯಂತ ಚರ್ಚೆಗೆ ಸಾಕಷ್ಟು ಎಡೆಮಾಡಿಕೊಟ್ಟಿದ್ದು. ಇಂದು ದಾವಣಗೆರೆ ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ತೀವ್ರಸ್ವರೂಪದ ಪ್ರತಿಭಟನೆಗಳು ಸೇರಿದಂತೆ. ಲಾಟಿಚಾರ್ಜ್ ಸಹ ನಡೆದಿದ್ದು ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಹರ ಸಾಹಸ ಪಟ್ಟರು.
ಇನ್ನು ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಾದ್ಯಂತ ಸಾರ್ವಜನಿಕರು, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.