ಪಾವಗಡ ಬಸ್ ದುರಂತ ಪ್ರಕರಣ ಗೃಹ ಸಚಿವ ಅರಗ ಜ್ಞಾನೆಂದ್ರ ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ.
ತುಮಕೂರು_ಪಾವಗಡ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಶನಿವಾರ ನಡೆದ ಬಸ್ ದುರಂತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಹಾಗಾಗಿ ಇಂದು ಆರೋಗ್ಯ ವಿಚಾರಿಸುವ ಸಂಬಂಧ ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು.
ಇದೇ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುಮಕೂರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ , ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ,ತುಮಕೂರು ಜಿಲ್ಲಾ ಆರೋಗ್ಯ ಅಧಿಕಾರಿ ನಾಗೇಂದ್ರಪ್ಪ, ಜಿಲ್ಲಾ ಸರ್ಜನ್ ವೀರಭದ್ರಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.