ತುಮಕೂರಿನ ರಿಂಗ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ.

ತುಮಕೂರಿನ ರಿಂಗ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ.

 

ತುಮಕೂರು ; ಅತೀ ವೇಗವಾಗಿ ಬಂದ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ತುಮಕೂರು ಹೊರವಲಯದ ಶೆಟ್ಟಿಹಳ್ಳಿಯ ಸಿಗ್ನಲ್‌‌ನಲ್ಲಿನ ರಿಂಗ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ.

 

ಕಾರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯ ಹೆಸರು ಮತ್ತು ವಿಳಾಸ ಸಧ್ಯಕ್ಕೆ ಲಭ್ಯವಾಗಿಲ್ಲ. ಅಪಘಾತದ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ.

 

ಈ ಘಟನೆ ನಡೆದದ್ದನ್ನು ಕಂಡ ಅಲ್ಲಿದ್ದ ಸ್ಥಳೀಯರು ಬೈಕ್ ಸವಾರರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.

 

ಸ್ಥಳಕ್ಕೆ ಜಯನಗರ ಪೊಲೀಸರು ಹಾಗೂ ಪಶ್ಚಿಮ ವಲಯದ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version