ಕೊರೊನಾ 2 ನೇ ಅಲೆ ಆತಂಕ : 1 ವಾರದಲ್ಲಿ ಕಡಿಮೆಯಾಗದಿದ್ರೆ ರಾಜ್ಯದಲ್ಲಿ ಕಠಿಣ ನಿಯಮ ಜಾರಿ : ಸಿಎಂ ಬಿಎಸ್ ವೈ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಪ್ರಮುಖ ಕಾರಣ ನಿರ್ಲಕ್ಯವಾಗಿದೆ. ಇನ್ನು ಪ್ರಕರಣಗಳ ಹೆಚ್ಚಳವನ್ನ ನೋಡ್ತಿದ್ರೆ ಇದು ಎರಡನೇ ಅಲೆಯಾಗಿರುವ ಸಾಧ್ಯತೆಯೂ ಇದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಹೆಚ್ಚಿದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಯಡಿಯೂರಪ್ಪ ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯ. ಉಲ್ಲಂಘಿಸಿದಲ್ಲಿ ದಂಡ ಅನಿವಾರ್ಯ. ಮದುವೆ, ಸಾಮಾಜಿಕ-ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರ ಸಂಖ್ಯೆ 500 ಮೀರಬಾರದು. ಹಿರಿಯ ನಾಗರಿಕರಿಗೆ ಲಸಿಕೆ ನೀಡಿಕೆಯಲ್ಲಿ ಚುರುಕು. ಗ್ರಾಮೀಣ ಪ್ರದೇಶ, ಕೊಳೆಗೇರಿಯಲ್ಲಿ ಲಸಿಕೆ ಹೆಚ್ಚಿಸಬೇಕು. ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಜೊತೆ ನೆರವು ಪಡೆದು ಲಸಿಕೆ. ಕರೊನಾ ಆಸ್ಪತ್ರೆಗಳಲ್ಲಿ, ಆಕ್ಸಿಜನ್, ಐಸಿಯು ಕರೊನಾ ಕೇರ್ಗೆ ಸಿದ್ಧತೆ ಮಾಡಿಕೊಳ್ಳಬೇಕು. ಖಾಸಗಿ ಆಸ್ಪತ್ರೆಯಲ್ಲಿ ಹಿಂದಿನಂತೆ ಚಿಕಿತ್ಸೆ ವ್ಯವಸ್ಥೆ ಮಾಡಲಾಗುತ್ತದೆ. ಕೊರೊನಾ ಪರೀಕ್ಷೆ ಹೆಚ್ಚಿಸಬೇಕು, ರೋಗಲಕ್ಷಣ ಇರುವವರಿಗೆ ಪರೀಕ್ಷೆ ಹೆಚ್ಚಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಜನರು ಜನ ಮಾಸ್ಕ್ ಧರಿಸುತ್ತಿಲ್ಲ, ಜನ ಸಹಕಾರ ಕೊಡಬೇಕು, ಒಂದು ವಾರ ಕಾದು ನೋಡುತ್ತೇವೆ, ನಂತರ ದಂಡ ಹಾಕುವುದು ಅನಿವಾರ್ಯ ಎಂದು ಸಿಎಂ ಯಡಿಯೂರಪ್ಪ ಹೇಳಿದರು. , ಸಭೆ-ಸಮಾರಂಭಗಳಲ್ಲಿ 500ಕ್ಕಿಂತ ಹೆಚ್ಚು ಜನ ಸೇರಬಾರದು, ಯಾರೇ ಆಗಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.