ನೂತನ ತುಮಕೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯ ಉದ್ಘಾಟನೆ.

ನೂತನ ತುಮಕೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯ ಉದ್ಘಾಟನೆ.

 

 

 

ತುಮಕೂರು_2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದಿಂದ ಪಕ್ಷವನ್ನು ಸಂಘಟಿಸುವ ಸಲುವಾಗಿ ತುಮಕೂರಿನ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಹೆಚ್ ಎಂ ಎಸ್ ಕಾಲೇಜು ಆವರಣದಲ್ಲಿ ನೂತನ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು.

 

 

 

 

ಇನ್ನು ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮಯೂರ ಜೈಕುಮಾರ್ ರವರು ಕಾಂಗ್ರೆಸ್ ಪಕ್ಷವನ್ನ ಕ್ಷೇತ್ರದಲ್ಲಿ ಬಲಪಡಿಸುವ ಹಿನ್ನೆಲೆಯಲ್ಲಿ ನೂತನ ಕಾರ್ಯಲಯವನ್ನು ಆರಂಭಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

 

 

ಬಿಜೆಪಿ ಪಕ್ಷದಿಂದ ರಾಜ್ಯದ ಜನತೆ ಹೈರಾಣರಾಗಿದ್ದು ಕರ್ನಾಟಕ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಲು ಸಿದ್ಧರಿದ್ದು ಇದರೊಂದಿಗೆ ಸ್ಥಳೀಯ ನಾಯಕರು ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಹೊಂದುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಮುಂದಾಗಬೇಕು. ಇನ್ನು ಕಾಂಗ್ರೆಸ್ ಪಕ್ಷದಿಂದ ಹಲವು ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು ಇದರೊಂದಿಗೆ ಸಾರ್ವಜನಿಕರ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಮುಖಂಡರು ಮುಂದಾಗಬೇಕು ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ವೈಫಲ್ಯಗಳನ್ನ ಜನತೆಗೆ ತಿಳಿಸುವುದರ ಜೊತೆಗೆ ರಾಜ್ಯದ ಜನತೆ ಸಹ ಹೊಸ ಸರ್ಕಾರವನ್ನ ಆಯ್ಕೆ ಮಾಡಲು ಬಯಸಿದ್ದಾರೆ ಇನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವಲ್ಲಿ ನಿರತವಾಗಿದ್ದು ಇನ್ನು ರಾಜ್ಯದಲ್ಲಿರುವ ಕಂಟ್ರಾಕ್ಟರ್ ಅಸೋಸಿಯೇಷನ್ ಮುಖಂಡರೇ ಈ ತರಹದ ಗಂಭೀರ ಆರೋಪ ಮಾಡಿದ್ದು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಇದರ ಜೊತೆಯಲ್ಲಿ ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡುವ ಕೆಲಸ ಬಿಜೆಪಿ ಪಕ್ಷದಿಂದ ಆಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

 

 

 

 

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಶಫಿ ಅಹಮದ್ ಮಾತನಾಡಿ ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರನ್ನ ಆಯ್ಕೆ ಮಾಡಲು ಪಕ್ಷದ ಮುಖಂಡರು ಕಾರ್ಯಕರ್ತರು ಶ್ರಮವಹಿಸಿ ಕೆಲಸ ನಿರ್ವಹಿಸಬೇಕು ಎಂದರು.

 

 

 

ನೂತನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಗೌಡ ಮಾತನಾಡಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಲು ಶ್ರಮ ವಹಿಸಲಾಗುವುದು ಎಂದರು.

 

 

 

 

ಇದೇ ಸಂದರ್ಭದಲ್ಲಿ ತುಮಕೂರು ನಗರ ಮಾಜಿ ಶಾಸಕ ರಫೀಕ್ ಅಹಮದ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಆರ್ ರಾಮಕೃಷ್ಣಪ್ಪ, ತುಮಕೂರು ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ, ಪಾಲಿಕೆ ವಿರೋಧ ಪಕ್ಷದ ನಾಯಕ ಕುಮಾರ, ಸೇರಿದಂತೆ ಕಾಂಗ್ರೆಸ್ ಮುಖಂಡರು ಪಾಲಿಕೆ ಸದಸ್ಯರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

 

ವರದಿ_ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version