ರಾಜ್ಯದಲ್ಲಿ ಬ್ರಷ್ಟಾಚಾರ ಪ್ರಮಾಣ ಹೆಚ್ಚಿದೆ _ಡಾ.ಜಿ ಪರಮೇಶ್ವರ್.
ತುಮಕೂರು_ರಾಜ್ಯದಲ್ಲಿ ಭ್ರಷ್ಟಾಚಾರ ಪ್ರಮಾಣ ಹೆಚ್ಚಿದೆ ಈ ಬಗ್ಗೆ ಸೂಕ್ತ ತನಿಖೆ ಆದರೆ ಸತ್ಯ ಸತ್ಯ ಹೊರಬರಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯ ಅವರೇ ಸ್ವತಹ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಸ್ತಾಪ ಮಾಡಿದ್ದು ಆ ಮೂಲಕ ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ನೀಡಬೇಕು ಎಂದು ಆರೋಪಿಸಿದ್ದಾರೆ ಹಾಗಾಗಿ ಅದರ ಮೂಲಕ ಎಲ್ಲರೂ ಕೂಡ 40 ಪರ್ಸೆಂಟ್ ಅಂತ ಹೇಳುತ್ತಾ ಇದ್ದಾರೆ ಇದಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯ ಅವಶ್ಯಕತೆ ಇದೆ ಇಂದು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಇನ್ನು ಒಟ್ಟಾರೆಯಾಗಿ ರಾಜ್ಯದಲ್ಲಿ ಎಲ್ಲ ಇಲಾಖೆಯಲ್ಲಿ ಭ್ರಷ್ಟಾಚಾರ ಜಾಸ್ತಿಯಾಗಿದೆ ಇನ್ನು ರಾಜ್ಯದಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಬ್ಇನ್ಸ್ಪೆಕ್ಟರ್ ಪರೀಕ್ಷೆಯಲ್ಲೂ ಕೂಡ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿರುವುದೆ ಸಾಕ್ಷಿ ಎಂದರು.
ಹಾಗಾಗಿ ಇಂತಹ ಸೂಕ್ಷ್ಮ ವಿಚಾರಗಳನ್ನು ಗಮನಿಸಿದಾಗ ರಾಜ್ಯದಲ್ಲಿ ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ ಎಂದರು.
ಸಿದ್ದರಾಮಯ್ಯ ಸರಕಾರದಲ್ಲಿ ಕಮಿಷನ್ ಆರೋಪಕ್ಕೆ ಸ್ಪಷ್ಟನೆ
ಇನ್ನು ರಾಜ್ಯದಲ್ಲಿ ಹಲವು ಮುಖ್ಯಮಂತ್ರಿಗಳ ನೇತೃತ್ವದ ಸರಕಾರಗಳು ಆಡಳಿತ ನಡೆಸಿದೆ ಆದರೆ ಯಾವ ಸರ್ಕಾರ ಹಾಗೂ ಯಾವ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಷ್ಟೆಷ್ಟು ಪರ್ಸೆಂಟ್ ಪಡೆಯುವ ಮೂಲಕ ಭ್ರಷ್ಟಾಚಾರ ನಡೆದಿದೆ ಎನ್ನುವ ಸಲುವಾಗಿ ಹಿಂದಿನ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ತನಿಖೆಯಾಗಲಿ ಎಂದರು.
ರಾಜ್ಯದಲ್ಲಿ ಯಡಿಯೂರಪ್ಪ, ಸಿದ್ದರಾಮಯ್ಯ ,ಕುಮಾರಸ್ವಾಮಿ ಸೇರಿದಂತೆ ಎಲ್ಲರ ಸಮ್ಮುಖದಲ್ಲಿ ತನಿಖೆಯಾಗಲಿ ಯಾವ ಸಂದರ್ಭದಲ್ಲಿ ಎಷ್ಟು ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವುದು ಎಲ್ಲರಿಗೂ ತಿಳಿಯಬೇಕಾಗಿದೆ ಹಾಗಾಗಿ ಪ್ರಧಾನಮಂತ್ರಿಗಳಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷರ ಪತ್ರದ ಮೇಲೆ ತನಿಖೆ ನಡೆಯುವ ಅವಶ್ಯಕತೆ ಇದೆ ಎಂದಿದ್ದಾರೆ.
ವರದಿ_ಮಾರುತಿ ಪ್ರಸಾದ್ ತುಮಕೂರು