ದೇಶ ಆಹಾರ ಮತ್ತು ಹಣ್ಣುತರಕಾರಿ ರಫ್ತು ನಲ್ಲಿ 9 ನೇ ಸ್ಥಾನಕ್ಕೆ ಬಂದಿದೆ, ವರ್ಷದಲ್ಲಿ ಉತ್ಪಾದನೆಯಲ್ಲಿ ಮೇಲುಗೈ : ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ
ಇನ್ನೂ ಎರಡು ವರ್ಷಗಳಲ್ಲಿ ದೇಶದಲ್ಲೆ ರಸಗೊಬ್ಬರ ಉತ್ಪಾದನೆ ಹೆಚ್ಚಿಸಲಾಗುತ್ತದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಆಯುಧ ಪೂಜೆ ಪ್ರಯುಕ್ತ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗಜಪಡೆಗೆ ಪೂಜೆ ಸಲ್ಲಿಸಿದರು .ಇಂದು ಮೈಸೂರಿನ ಅರಮನೆಗೆ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಗಜಪಡೆಗೆ ಪೂಜೆ ಸಲ್ಲಿಸಿದರು ಪ್ರತಿ ವರ್ಷ ದಂತೆ ಈ ವರ್ಷವೂ ಮಾವುತರು ಮತ್ತು ಕಾವಾಡಿಗರಿಗೆ ಉಪಾಹಾರ ಕೂಟದಲ್ಲಿ ಭಾಗವಹಿಸಿ ಊಟ ಬಡಿಸಿದರು
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,2008ರಲ್ಲಿ ನಾನು ಉಸ್ತುವಾರಿ ಸಚಿವೆಯಾಗಿದ್ದಾಗ ಎಲ್ಲ ಮಾವುತರು, ಕಾವಾಡಿಗರಿಗೆ ಉಪಾಹಾರ ನೀಡುವುದನ್ನು ಆರಂಭಿಸಿದ್ದೆವು. ಅದನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಮಾವುತರು, ಕಾವಾಡಿಗರು ನಗರಕ್ಕೆ ಬರುವುದು ವರ್ಷಕ್ಕೆ ಒಮ್ಮೆಯಷ್ಟೆ. ಹಿಂದೆ ಅವರಿಗೆ ಗೌರವಧನವಾಗಿ ಕೇವಲ 5,000 ರೂ. ನೀಡಲಾಗುತ್ತಿತ್ತು. ಉಳಿದಂತೆ ಅವರು ಕಾಡಿನಲ್ಲಿ ಕೂಲಿ ಇನ್ನಿತರ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈಗ ಅವರನ್ನು ಸರ್ಕಾರಿ ನೌಕರರು ಎಂದೇ ಪರಿಗಣಿಸಿ ತಿಂಗಳ ಸಂಬಳ ನೀಡಲಾಗುತ್ತಿದೆ. ಅವರ ಮಕ್ಕಳಿಗೆ ಶಿಕ್ಷಣ ಕೊಡುವಂತೆಯೇ ಪ್ರೇರೇಪಿಸಲಾಗುತ್ತಿದೆ ಎಂದು ತಿಳಿಸಿದರು.
ಮಾವುತರು, ಕಾವಾಡಿಗರೊಂದಿಗೆ ಕಾಲ ಕಳೆಯುವುದೆಂದರೆ ನನಗೆ ಆನಂದ. ಹೀಗಾಗಿ, ಅವರೊಟ್ಟಿಗೆ ಉಪಾಹಾರ ಕೂಟದಲ್ಲಿ ಭಾಗವಹಿಸಿದ್ದು ಖುಷಿ ಎನಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಮಳೆ ಹಾಗೂ ಬೆಳೆಯಾಗಿದೆ ನಮ್ಮ ದೇಶ ರಫ್ತು ಮಾಡುವ ದೇಶಗಳಲ್ಲಿ 10 ಸ್ಥಾನಕ್ಕೆ ಬರಬೇಕು ಎಂದು ಕೊಂಡಿದೆವು ಆದರೆ ಆಹಾರ ಹಣ್ಣು ಮತ್ತು ತರಕಾರಿಗಳನ್ನು ರಫ್ತು ಮಾಡುವ ದೇಶಗಳಲ್ಲಿ 9 ನೇ ಸ್ಥಾನ ಕ್ಕೆ ಬಂದಿದೆ 305 ಮಿಲಿಯನ್ ಮೆಟ್ರಿಕ್ ಟನ್ ಆಹಾರ ಧಾನ್ಯ ಹಾಗೂ 326 ಮಿಲಿಯನ್ ಮೆಟ್ರಿಕ್ ಟನ್ ತರಕಾರಿ ಮತ್ತು ಹಣ್ಣುಗಳನ್ನು ಕಳೆದ ಒಂದು ವರ್ಷದಲ್ಲಿ ಬೆಳೆದಿದೆ 135 ಕೋಟಿ ಜನರಿಗೆ ಸಾಕಾಗುವಷ್ಟು ಆಹಾರ ಉತ್ಪಾದನೆ ಮಾಡುತ್ತಿದೆ
ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ ಬೆಲೆ ವಿಮೆ ಯೋಜನೆ ರೈತರಿಗೆ ಹೆಚ್ಚು ಸಹಾಯಕವಾಗಿದೆ ಅಗಾಗಿ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒಂದು ಜಿಲ್ಲೆ ಒಂದು ಉತ್ಪಾದನೆ ಯೋಜನೆಯ ಮೂಲಕ ರೈತರನ್ನು ಸ್ವಾವಲಂಬನೆ ಮಾಡುವ ಉದ್ದೇಶ ಹೊಂದಿದೆ
ರಸಗೊಬ್ಬರವನ್ನು ಹೊರದೇಶಗಳಿಂದ ತರಿಸಿಕೊಳ್ಳುತ್ತಿದ್ದು,ಕೊರೊನದಿಂದ ಸ್ವಲ್ಪ ಸಮಸ್ಯೆ ಆಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು,ಇನ್ನೂ ಎರಡು ವರ್ಷಗಳಲ್ಲಿ ದೇಶದಲ್ಲೇ ರಸಗೊಬ್ಬರ ಉತ್ಪಾದನೆ ಹೆಚ್ಚುಗೊಳಿಸಿ ಸ್ವಾವಲಂಬಿ ಆಗುವುದಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.
ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟ ರಾಜಕೀಯ ಪ್ರೇರಿತ. ಗುಜರಾತ್, ಪಂಜಾಬ್, ಉತ್ತರ ಪ್ರದೇಶ, ಮಣಿಪುರದಲ್ಲಿ ಚುನಾವಣೆ ಹತ್ತಿರದಲ್ಲಿದೆ. ಚುನಾವಣೆ ಉದ್ದೇಶವಾಗಿಟ್ಟುಕೊಂಡು ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. 30-40 ವರ್ಷಗಳ ಹಿಂದೆಯೇ ರೈತರು ಬೇಡಿಕೆ ಇಟ್ಟಿದ್ದರು. ಎಪಿಎಂಸಿ ಕಾಯ್ದೆ ರದ್ದಾಗಬೇಕು, ಅದಕ್ಕೆ ತಿದ್ದುಪಡಿಯಾಗಬೇಕು ಎಂಬುದು ಬಿಜೆಪಿ ಬೇಡಿಕೆಯಲ್ಲ, ರೈತರ ಬೇಡಿಕೆಯಾಗಿತ್ತು. ಈ ಹಿಂದೆಯೇ ಪಾರ್ಲಿಮೆಂಟ್‌ನಲ್ಲಿ ಆಗಿದ್ದ ಚರ್ಚೆ, ವಿವಿಧ ಸಮಿತಿಗಳು ಸಲ್ಲಿಸಿದ ವರದಿ ಆಧರಿಸಿ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆಗಳಿಂದ ರೈತರಿಗೆ ಒಳ್ಳೆಯದಾಗಿಬಿಡುತ್ತೆ ಎಂಬ ಕಾರಣಕ್ಕೆ ಅನೇಕ ರಾಷ್ಟ್ರಗಳೂ ವಿರೋಧ ವ್ಯಕ್ತಪಡಿಸುತ್ತಿವೆ. ಅದಕ್ಕೆ ಭಾರತದಲ್ಲೂ ಕೆಲವರು ಕೈ ಜೋಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೋರಾಟಕ್ಕೆ ರೈತರು ಹಾಗೂ ಬೇರೆ ಸಂಘಟನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಹಿತಕ್ಕೆ ಬದ್ಧವಾಗಿದ್ದು, ಚರ್ಚೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.
ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್. ಅಧಿಕಾರದಲ್ಲಿರಲಿ, ಇಲ್ಲದಿರಲಿ ನಿರಂತರವಾಗಿ ಕಾಂಗ್ರೆಸ್ ಭ್ರಷ್ಟಾಚಾರ ಮಾಡಿಕೊಂಡು ಬಂದಿದೆ. ತಮ್ಮ ಅಧಿಕಾರವಧಿಯಲ್ಲಿ ಆಡಳಿತ ಇಲಾಖೆಗಳನ್ನು ಲೂಟಿ ಮಾಡಿದೆ. ಆ ಪದ್ಧತಿಯನ್ನು ರಾಜ್ಯಗಳಲ್ಲೂ ಮುಂದುವರಿಸಿದೆ. ಕಾಂಗ್ರೆಸ್‌ನ ಹಿರಿಯ ನಾಯಕರೇ ತಮ್ಮ ಪಕ್ಷದ ಬಗ್ಗೆ ಸತ್ಯ ಹೇಳಲು ಮುಂದಾಗಿದ್ದಾರೆ ಎಂದು ಹೇಳಿದರು.